newsfirstkannada.com

BREAKING: ವಿದ್ಯಾರ್ಥಿಗಳೇ ಗಮನಿಸಿ.. SSLC ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

Share :

Published May 17, 2024 at 3:15pm

Update May 17, 2024 at 3:16pm

    SSLCಗೆ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟಿದ್ದಕ್ಕೆ ಭಾರೀ ವಿರೋಧ

    ಯಾರನ್ನ ಕೇಳಿ ಹೆಚ್ಚುವರಿ ಅಂಕ ಕೊಟ್ರಿ ಎಂದು ಗರಂ ಆದ ಸಿಎಂ ಸಿದ್ದರಾಮಯ್ಯ

    ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?

ಬೆಂಗಳೂರು: ಈ ಬಾರಿಯ SSLC ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದರ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆಯಾದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಾರೆ.

ಸಿಎಂ ಸಭೆಯಲ್ಲಿ SSLC ಪರೀಕ್ಷೆಯಲ್ಲಿ 20%ರಷ್ಟು ಗ್ರೇಸ್ ಮಾರ್ಕ್ಸ್‌ ನೀಡಿದರ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾರನ್ನ ಕೇಳಿ ಹೆಚ್ಚುವರಿ ಅಂಕ ಕೊಟ್ರಿ. ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿಯನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಫಸ್ಟ್.. ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿದೆ. ಸಿಎಂ ಸಭೆಯಲ್ಲಿ ಶಿಕ್ಷಣ ಇಲಾಖೆಯಿಂದಲೂ ಗ್ರೇಸ್ ಮಾರ್ಕ್ಸ್‌ಗೆ ಸಾಕಷ್ಟು ವಿರೋಧ ಬರ್ತಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರ್ತೀವೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ!
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ್ದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿಕೆ ನೀಡಿದ್ದಾರೆ. ಯಾವಾಗಲೂ ಗ್ರೇಸ್ ಮಾರ್ಕ್ಸ್‌ ಶೇಕಡಾ 5ರಷ್ಟು ಇತ್ತು. ಕೊರೊನಾ ಸಂದರ್ಭದಲ್ಲಿ ಶೇಕಡಾ 10 ರಷ್ಟು ಮಾಡಲಾಗಿತ್ತು.

ಈ ಬಾರಿ ವಿದ್ಯಾರ್ಥಿಗಳಿಗೆ ಕಾನ್ಫಿಡೆಂಟ್ ಕೊಟ್ಟು ಪಾಸ್ ಮಾಡಲು ಶೇಕಡಾ 20 ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಶೇ.20 ಗ್ರೇಸ್ ಮಾರ್ಕ್ಸ್‌ ಇರಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮೆರಿಟ್‌ನಲ್ಲಿ ಎಂಜಿನಿಯರಿಂಗ್ ಸೀಟ್ ಪಡೆದಿದ್ದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾರಣವೇನು? 

ಮಕ್ಕಳ ಬೆಳವಣಿಗೆ ದೃಷ್ಟಿಯಿಂದ ಇದನ್ನ ಮಾಡಿದ್ದೆವು. ಸದ್ಯ ಇದು ಬೇಡ ಅನ್ನೋದು ಇದೆ. ಹೀಗಾಗಿ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರಲ್ಲ. ಗ್ರೇಸ್ ಮಾರ್ಕ್ಸ್‌ನಿಂದ ಮಕ್ಕಳಲ್ಲಿ ಇಂಫ್ರೂವ್ ಮೆಂಟ್ ಇತ್ತು. ಆದರೆ ಈಗ ಬೇಡ ಅನ್ನೋ ನಿಲುವಿಗೆ ಬಂದಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ವಿದ್ಯಾರ್ಥಿಗಳೇ ಗಮನಿಸಿ.. SSLC ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

https://newsfirstlive.com/wp-content/uploads/2024/03/SSLC_CM.jpg

Load More