/newsfirstlive-kannada/media/post_attachments/wp-content/uploads/2024/07/SCHOOL-RAIN-2.jpg)
ರಾಜ್ಯದಲ್ಲಿ ಇನ್ನೂ ಐದು ದಿನ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಹೀಗಾಗಿ ಈ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಜನರು ಎಚ್ಚರದಿಂದ ಇರಬೇಕು ಎಂದು ತಿಳಿಸಿದೆ.
ನಿನ್ನೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
ನಿನ್ನೆ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ- 18 ಸೆಂ.ಮೀ.
ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ- 16 ಸೆಂ.ಮೀ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ- 15 ಸೆಂ.ಮೀ.
ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ- 14 ಸೆಂ.ಮೀ.
ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ- 12 ಸೆಂ. ಮೀ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕಳಸದಲ್ಲಿ ತಲಾ- 11 ಸೆಂ.ಮೀ. ಮಳೆಯಾಗಿದೆ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us