BREAKING: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟ

author-image
admin
Updated On
ಡೊನೇಷನ್ ಹಾವಳಿಗೆ ಬೇಸತ್ತ ಪೋಷಕರಿಗೆ ಸಿಹಿಸುದ್ದಿ; ಸರ್ಕಾರಿ ಶಾಲೆಯಲ್ಲೂ ಶುರುವಾಗುತ್ತಿದೆ ಪ್ರೀ ನರ್ಸರಿ
Advertisment
  • 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ
  • ಮೇ 15ರಂದು KARTET-2024 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೇ ದಿನ
  • ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಅಧಿಕೃತ ಆದೇಶ

ಬೆಂಗಳೂರು: 2024ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ. ಮುಂದಿನ ಜೂನ್ 30ರಂದು (KARTET-2024) ಟಿಇಟಿ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ. ಆನ್‌ಲೈನ್‌ನಲ್ಲಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಮೇ 15ರಂದು ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೇ ದಿನವಾಗಿದೆ.

ಇದನ್ನೂ ಓದಿ: PUC ಪರೀಕ್ಷೆಯಲ್ಲಿ ಅವಳಿ ಸಹೋದರಿಯರಿಗೆ ಅಚ್ಚರಿ ಫಲಿತಾಂಶ.. ಇವರ ಮಾರ್ಕ್ಸ್‌ ಕೇಳಿದ್ರೆ ಶಾಕ್ ಆಗ್ತೀರಾ!

ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿ ಅರ್ಥೈಸಿಕೊಂಡು, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಲು ಸೂಚಿಸಲಾಗಿದೆ. ಆನ್‌ಲೈನ್‌ನಲ್ಲಿ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು https://schooleducation.Karnataka.gov.in ನಲ್ಲಿ ಅವಕಾಶವಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment