newsfirstkannada.com

Breaking News: ಕಾವೇರಿ ಪ್ರಾಧಿಕಾರದ ಆದೇಶಕ್ಕೆ ಮಣಿದ ಸಿದ್ದು ಸರ್ಕಾರ; ತಮಿಳುನಾಡಿಗೆ ಹರಿದ ಕಾವೇರಿ ನೀರು..!

Share :

19-09-2023

    ನಿಲ್ಲದ ‘ಕಾವೇರಿ’; ಮಂಡ್ಯ ರೈತರು ಕಂಗಾಲು

    5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ

    ಮುಂದೆ ಕುಡಿಯುವ ನೀರಿಗೂ ಹಾಹಾಕಾರ ಸಾಧ್ಯತೆ

ಮಂಡ್ಯ: ಕಾವೇರಿ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಸರ್ಕಾರ ಮಣಿದಿದ್ದು, ಕೆಆರ್​ಎಸ್ ಮತ್ತು ಕಬಿನಿ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸಲಾಗಿದೆ. ಎರಡು ಡ್ಯಾಂಗಳಿಂದ 3,834 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ನಿನ್ನೆಯಷ್ಟೇ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನಿರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿತ್ತು. CWMA ಆದೇಶವನ್ನು ಪಾಲನೆ ಮಾಡಿರುವ ರಾಜ್ಯ ಸರ್ಕಾರ ನೀರನ್ನು ಬಿಡುಗಡೆ ಮಾಡಿದೆ.

KRS ಡ್ಯಾನಿಂದ 2,171 ಕ್ಯೂಸೆಕ್ ಬಿಡುಗಡೆ ಮಾಡಿದೆ. ಕಬಿನಿ ಜಲಾಶಯದಿಂದ 1,663 ಕ್ಯೂಸೆಕ್ ಬಿಡುಗಡೆ ಮಾಡಲಾಗಿದೆ. ಎರಡು ಡ್ಯಾಂಗಳಿಂದ ಒಟ್ಟು 3,834 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಉಳಿದ‌ 1,166 ಕ್ಕೂ ಅಧಿಕ ಕ್ಯೂಸೆಕ್ ನೀರು ಮಳೆಯಿಂದ ಹರಿಯುತ್ತಿದೆ. ನಿನ್ನೆ ಕಾವೇರಿ ಕೊಳ್ಳದ ಸುತ್ತಮುತ್ತದ ಪ್ರದೇಶದಲ್ಲಿ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ನಿನ್ನೆ ಮಳೆಯಾಗಿದೆ.

ತಮಿಳುನಾಡಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಮತ್ತೊಂದು ಕಡೆ ರೈತರು ತಮ್ಮ ಬೆಳೆಗೆ ನೀರಿಲ್ಲ ಎಂದು ಬೇಡಿಕೊಳ್ಳುತ್ತಿದ್ದರೂ ಮತ್ತೆ ತಮಿಳುನಾಡಿಗೆ ನೀರು ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಪ್ರತಿಭಟನೆ ಮತ್ತಷ್ಟು ಜೋರಾಗುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ಕಾವೇರಿ ಪ್ರಾಧಿಕಾರದ ಆದೇಶಕ್ಕೆ ಮಣಿದ ಸಿದ್ದು ಸರ್ಕಾರ; ತಮಿಳುನಾಡಿಗೆ ಹರಿದ ಕಾವೇರಿ ನೀರು..!

https://newsfirstlive.com/wp-content/uploads/2023/09/CUAVERY.jpg

Load More