/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ಇಡೀ ರಾಜ್ಯದ್ಯಂತ ಮುಂಗಾರು ಮಳೆ ಶುರುವಾಗಿದೆ. ಈ ಮುಂಗಾರು ಮಳೆ ದೊಡ್ಡ ಅವಾಂತರಗಳನ್ನೇ ಸೃಷ್ಟಿ ಮಾಡಿದೆ. ಈಗ ಚಳಿಗಾಲ ಶುರುವಾಗಿದ್ದು, ಇದರ ಮಧ್ಯೆ ಮಳೆ ಕೂಡ ಮುಂದುವರಿದಿದೆ. ಇನ್ನೂ ಎರಡು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಲೇ ಇದೆ. ಇಂದು ಬೆಳಿಗ್ಗೆಯಿಂದಲೇ ಇಡೀ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ಮುಂದಿನ ಕೆಲವು ಗಂಟೆಗಳ ಕಾಲ ವರುಣನ ಆರ್ಭಟ ಜೋರಾಗಿ ಇರಲಿದೆ. ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲಗಳಲ್ಲೂ ಇಂದು ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಎಲ್ಲೆಲ್ಲಿ ಮಳೆ?
ನವೆಂಬರ್ 18 ಮತ್ತು 19ನೇ ತಾರೀಕು ಭರ್ಜರಿ ಮಳೆಯಾಗಲಿದೆ. ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ರಾಮನಗರ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ