/newsfirstlive-kannada/media/post_attachments/wp-content/uploads/2024/10/BNG-RAIN-RAIN-1.jpg)
ಬೆಂಗಳೂರು: ರಾಜ್ಯದ ಜನರಿಗೆ ಕಹಿಸುದ್ದಿ ಒಂದಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಕಾಡಲಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ಇಂದಿನಿಂದ 3 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಎರಡು ದಿನಗಳಿಂದ ಬೆಂಗಳೂರಲ್ಲಿ ಬಿಸಿಲೇ ಇಲ್ಲ. ಇನ್ನೂ 3 ದಿನ ಮಳೆ ಮುಂದುವರಿಯಲಿದ್ದು, ಸಿಲಿಕಾನ್ ಸಿಟಿ ಜನರಿಗೆ ಮತ್ತಷ್ಟು ಕಾಟ ಎದುರಾಗಲಿದೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ಕೆಲವು ಜಿಲ್ಲೆಗಳಿಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ?
ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ, ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಎಲ್ಲೆಲ್ಲಿ ರೆಡ್ ಅಲರ್ಟ್?
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ರಾಮನಗರಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇದನ್ನೂ ಓದಿ:ಆಕ್ಷನ್ ಬೆನ್ನಲ್ಲೇ ರಿಂಕು ಸಿಂಗ್ಗೆ ಬಿಗ್ ಶಾಕ್ ಕೊಟ್ಟ ಕೆಕೆಆರ್; ಮೂವರ ಮಧ್ಯೆ ಬಿಗ್ ಫೈಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ