/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ಇಡೀ ರಾಜ್ಯಾದ್ಯಂತ ಚಳಿಗಾಲದ ಮಧ್ಯೆಯೂ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡಿಸೆಂಬರ್ 7ನೇ ತಾರೀಕು ಮೋಡ ಕವಿ ವಾತಾವರಣ ಇರಲಿದೆ. ಬಳಿಕ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಬೆಂಗಳೂರಿಗರು ಮನೆಯಿಂದ ಹೊರ ಬರೋ ಮುನ್ನ ಎಚ್ಚರ ವಹಿಸಬೇಕು.
ಎಲ್ಲೆಲ್ಲಿ ಮಳೆ?
ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಬೀಳಲಿದೆ. ಇನ್ನುಳಿದಂತೆ ಯಾವುದೇ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಮೂರು ದಿನಗಳ ಹಿಂದೆಯಷ್ಟೇ ಚಳಿ ಮತ್ತು ಮಳೆ ನಿಂತಿತ್ತು. ಫೆಂಗಲ್ ಚಂಡಮಾರುತದ ಬಿಸಿ ರಾಜ್ಯಕ್ಕೆ ತಟ್ಟಿದ್ದ ಪರಿಣಾಮ ಜೋರು ಮಳೆ ಆಗಿತ್ತು. ಇಡೀ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ ಬಿದ್ದ ಕಾರಣ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿತ್ತು.
ಇದನ್ನೂ ಓದಿ:ಫ್ಯಾನ್ಸ್ಗೆ ಭರ್ಜರಿ ಗುಡ್ನ್ಯೂಸ್: RCB ಬಿಟ್ಮೇಲೂ ಫಾಫ್ ಡುಪ್ಲೆಸಿಸ್ಗೆ ಖುಲಾಯಿಸಿದ ಅದೃಷ್ಟ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ