/newsfirstlive-kannada/media/post_attachments/wp-content/uploads/2024/05/Bangalore-Rains-1.jpg)
ಬೆಂಗಳೂರು: ಫೆಂಗಲ್ ಚಂಡಮಾರುತದಿಂದ ಚೇತರಿಸಿಕೊಳ್ಳುವ ಹೊತ್ತಲ್ಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಯೆಲ್ಲೋ ಅಲರ್ಟ್ ಘೋಷಣೆ
ಗುರುವಾರ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ. ಅಷ್ಟೇ ಅಲ್ಲ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಆಲಮಟ್ಟಿ, ಕಲಘಟಗಿ, ಭಾಗಮಂಡಲ, ಕೊಪ್ಪದಲ್ಲಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ರಜತ್ ಹೆಗಲಿಗೆ ಆರ್ಸಿಬಿ ನಾಯಕತ್ವ; ಕ್ಯಾಪ್ಟನ್ಸಿ ಹೊಣೆ ಹೊರಲು ಪಾಟಿದಾರ್ ಸಿದ್ಧ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ