/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ರಾಜ್ಯದ ಹಲವೆಡೆ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರು, ಹಾಸನ, ಮಲೆನಾಡು ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಬೀಳಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us