/newsfirstlive-kannada/media/post_attachments/wp-content/uploads/2024/05/RAIN-15.jpg)
ಹವಾಮಾನ ಇಲಾಖೆ ರಾಜ್ಯದಲ್ಲಿ ಸುರಿಯುವ ಮಳೆಯ ಬಗ್ಗೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಸುರಿಯುತ್ತಿರುವ ನೈರುತ್ಯ ಮುಂಗಾರಿನಿಂದ ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಆದರಿಂದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬೊಲೆರೊ ಮತ್ತು ಟ್ರಕ್​ ನಡುವೆ ಭೀಕರ ಅಪಘಾತ.. ಇಬ್ಬರು ಮಕ್ಕಳು ಸೇರಿ 9 ಜನರು ಸಾವು
ಇಂದು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ: ತುಂಬಿದ ಕೃಷ್ಣ ನದಿ, ಮಳೆಯಿಂದಾಗಿ ಉರುಳಿ ಬಿದ್ದ ಬಸ್​.. ರಾಜ್ಯದಲ್ಲಿ ವರುಣಾರ್ಭಟಕ್ಕೆ ಸಾಲು ಸಾಲು ಅವಾಂತರ
ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ