/newsfirstlive-kannada/media/post_attachments/wp-content/uploads/2024/05/Bangalore-Rains-1.jpg)
ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಗುಡುಗು, ಸಿಡಿಲು ಸಮೇತ ಮಳೆಯಾಗಬಹುದು ಎನ್ನಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವರುಣನ ಆಗಮನದ ಸೂಚನೆ ಇದೆ. ಬೆಂಗಳೂರಿನಲ್ಲಿ ನಾಳೆ, ನಾಡಿದ್ದು ಮಳೆ ಸುರಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: ಭವಾನಿ ರೇವಣ್ಣಗೂ ಕಾದಿದೆಯಾ ಸಂಕಷ್ಟ.. JDS ಮುಖಂಡರ ಜೊತೆ ಮಹತ್ವದ ಚರ್ಚೆ
ಇದನ್ನೂ ಓದಿ:ನಟಿ ಅಮೂಲ್ಯಗೆ ಚಾನ್ಸ್ ಕೊಡಿಸ್ತೀನಿ ಅಂತ ಮಂಚಕ್ಕೆ ಕರೆದ ಯುವಕ.. ಆಮೇಲೇನಾಯ್ತು?
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸೂಚನೆ ಇದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಸುರಿಯುತ್ತದೆ. ಮಳೆ ಜೊತೆಗೆ ಗಾಳಿಯು ಬೀಸುವುದರಿಂದ ರಸ್ತೆಗಳಲ್ಲಿ ವಿದ್ಯುತ್ ಕಂಬ, ಮರಗಳು ಬೀಳಬಹುದು. ಹೀಗಾಗಿ ವಿದ್ಯುತ್ ವ್ಯತ್ಯಯವಾಗುವುದು ಸಾಮಾನ್ಯವಾಗಿರುತ್ತದೆ. ಮಳೆ ಬರುವಾಗ ಮನೆಯಲ್ಲಿನ ಕರೆಂಟ್ ಸ್ವಚ್ಗಳನ್ನು ಆಫ್ ಮಾಡಬೇಕು. ಜನರು ಕೂಡ ಎಚ್ಚರಿಕೆಯಿಂದ ಮನೆಯಲ್ಲಿ ಇರಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ