/newsfirstlive-kannada/media/post_attachments/wp-content/uploads/2024/05/Heavy-Rains-Karnataka.jpg)
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಇತ್ತ ಸಿಲಿಕಾನ್​ ಸಿಟಿಯಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ ಜೊತೆಗೆ ತುಂತುರು ಮಳೆ ಆಗಮನವಾಗಿದೆ. ಸದ್ಯದ ವಾತಾವರಣ ಕೂಲ್ ಕೂಲ್ ಆಗಿದೆ
7 ದಿನ ಮಳೆ ಬರೋ ಸಾಧ್ಯತೆ
ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ ಎನ್ನಲಾಗಿದೆ.
ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್
ಉತ್ತರ ಕರ್ನಾಟಕ ಭಾಗದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆ ಉತ್ತರ ಕನ್ನಡ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಬೆಂಗಳೂರಲ್ಲಿ ಮಳೆ ಬರುತ್ತಾ?
ಇತ್ತ ಸಿಲಿಕಾನ್ ಸಿಟಿಯಲ್ಲೂ ಮಳೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಂಜೆ ವೇಳೆ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us