/newsfirstlive-kannada/media/post_attachments/wp-content/uploads/2024/05/Heavy-Rains.jpg)
ಬೆಂಗಳೂರು: ನಾಳೆ ಕರ್ನಾಟಕದ ಹಲವೆಡೆ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳ ಕಾಲ ಭರ್ಜರಿ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮಂಜಿನ ವಾತಾವರಣ ಇರಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ ಎಂದು ತಿಳಿಸಿದೆ.
ರಾಜ್ಯದ ಈ ಭಾಗಗಳಲ್ಲಿ ಮಳೆ
ಮೈಸೂರು, ಕೊಡಗು, ಹಾಸನ, ರಾಮನಗರ, ತುಮಕೂರು, ವಿಜಯನಗರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಭರ್ಜರಿ ಮಳೆ ಆಗಿದೆ. ಸುರಿದ ಭಾರೀ ಮಳೆಯಿಂದ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳೆಲ್ಲ ಭರ್ತಿಯಾಗಿವೆ. ಅನ್ನದಾತರ ಮುಖದಲ್ಲಿ ಮಂದಹಾಸ ಕೂಡ ಮೂಡಿದಂತಾಗಿದೆ. ಮತ್ತೊಂದೆಡೆ ಹಲವೆಡೆ ಅತೀವೃಷ್ಠಿಯಿಂದಾಗಿ ಬೆಳೆಗಳೆಲ್ಲ ನಾಶವಾದ ಘಟನೆಗಳು ಕೂಡ ನಡೆದಿವೆ.
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us