/newsfirstlive-kannada/media/post_attachments/wp-content/uploads/2025/04/RAIN.jpg)
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು,ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ. ಹೀಗಾಗಿ ನಾಳೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣತೆಯೂ ಎರಡರಿಂದ ಮೂರು ಡಿಗ್ರಿ ಇಳಿಯುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗಿದೆ. ಮರಾಠವಾಡ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಂಡಮಾರುತ ಎದ್ದಿದೆ. ದಕ್ಷಿಣ ಛತ್ತೀಸ್‌ಗಢದಿಂದ ವಿದರ್ಭ ಮತ್ತು ಮರಾಠವಾಡ ಬಳಿಯ ಪ್ರದೇಶದ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ಇದರ ಪರಿಣಾಮ ಇರಲಿದೆ.
ಇದನ್ನೂ ಓದಿ: ಹೊಸ ತೊಡಕು ಸಂಭ್ರಮ.. ಮಟನ್ ಅಂಗಡಿ ಮುಂದೆ ಜನವೋ ಜನ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ