/newsfirstlive-kannada/media/post_attachments/wp-content/uploads/2024/08/KAS.jpg)
ಬೆಂಗಳೂರು: ಕೆಎಎಸ್ ಪ್ರಿಲಿಮಿನರಿ ಪರೀಕ್ಷೆಯ ಗೊಂದಲದ ನಡುವೆಯೇ ಇಂದು ಬೆಳಗ್ಗೆ ವಿಜಯನಗರ ಪೊಲೀಸರು ಕೆಲವು ಆಕಾಂಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ.
ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಸೇರಿ ಹಲವರನ್ನ ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆಗಸ್ಟ್ 27ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡುವಂತೆ ಇವರು ಆಗ್ರಹಿಸುತ್ತಿದ್ದಾರೆ.
ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ. ಆದರಿವತ್ತು ರಾಜ್ಯಪಾಲರನ್ನ ಭೇಟಿ ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ರಾಜ್ಯಪಾಲರು ಕಾಲಾವಕಾಶ ಕೂಡ ನೀಡಿದ್ದರು. ಜೊತೆಗೆ ವಿಜಯನಗರದಲ್ಲಿ ಸಿಎಂ ಭೇಟಿಗೆ ನಿರ್ಧರಿಸಿದ್ದರು. ಸಂಜೆ ವಿಜಯನಗರದಲ್ಲಿ ಸಿಎಂ ಪಾಲಿಕೆ ಬಜಾರ್ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಸಿಎಂ ಭೇಟಿ ಮಾಡುವ ಪ್ರಯತ್ನದಲ್ಲಿದ್ದ ಅಭ್ಯರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗೃತ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಶಿಖರ್ ಧವನ್​ಗೂ ಬಿಸಿಸಿಐ ಅನ್ಯಾಯ -ಗಬ್ಬರ್ ಸಿಂಗ್ ನಿವೃತ್ತಿ ಹಿಂದಿದೆ ಕೋಪ, ಆಕ್ರೋಶ
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us