ಆರೋಪಿ RD ಪಾಟೀಲ್ ಪರ ವಕೀಲ ಬಿ. ಶಾಮಸುಂದರ ವಾದ
ಕಲಬುರಗಿ 1ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ
ಪೊಲೀಸರಿಂದ ತಪ್ಪಿಸಿಕೊಂಡು ಕಿಂಗ್ಪಿನ್ ಹೋಗಿದ್ದು ಎಲ್ಲಿಗೆ..?
ಕಲಬುರಗಿ: KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ಪಿನ್ ಆರ್.ಡಿ ಪಾಟೀಲ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದಾನೆ. ಇದರ ಬೆನ್ನಲ್ಲೇ ಆರೋಪಿಯ 3 ಕೇಸ್ಗಳಲ್ಲಿನ ಜಾಮೀನು ಅರ್ಜಿಗಳನ್ನು ಕೋರ್ಟ್ ತಿರಸ್ಕಾರ ಮಾಡಿದೆ.
ಕೆಇಎ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ಗೆ ಜೈಲೆ ಗತಿಯಾದಂತೆ ಆಗಿದೆ. ಕಲಬುರಗಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಪಾಟೀಲ್ ಪರ ವಕೀಲ ಬಿ.ಶಾಮಸುಂದರ ಮೂರು ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೋಹನ್ ಬಾಡಗಂಡಿ ಅವರು ಮೂರು ಜಾಮೀನು ಅರ್ಜಿಗಳನ್ನು ತಿರಸ್ಕಾರ ಮಾಡಿದ್ದಾರೆ.
ಇನ್ನು ನ್ಯಾಯಮೂರ್ತಿಗಳ ಮುಂದೆ ಆರ್.ಡಿ ಪಾಟೀಲ್ ಪರ ಜಾಮೀನಿಗಾಗಿ ವಕೀಲ ಬಿ.ಶಾಮಸುಂದರ ಅವರು ವಾದ ಮಂಡಿಸಿದರು. ಅದರಂತೆ ಅಭಿಯೋಜಕರಾದ ನರಸಿಂಹಲು ಅವರು ಸರ್ಕಾರದ ಪರವಾಗಿ ವಾದ ಮಂಡಿಸಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ನ್ಯಾಯಮೂರ್ತಿಗಳಿಗೆ ಮನವಿ ಮಾಡಿದರು.
ಸದ್ಯ ಪೊಲೀಸರಿಂದ ತಪ್ಪಿಸಿಕೊಂಡಿರುವ ಆರ್.ಡಿ ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾರ್ಯಾಚರಣೆ ಮಾಡಿ ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು. ಪ್ರಕರಣಕ್ಕೆ ಅಗತ್ಯಬಿದ್ದರೆ ಸಿಐಡಿ ತನಿಖೆಗೆ ಕೊಡುತ್ತೇವೆ. ಮರು ಪರೀಕ್ಷೆ ನಡೆಸುವ ಬಗ್ಗೆ ಕೆಇಎ ತೀರ್ಮಾನ ಮಾಡುತ್ತದೆ. ನಮಗೆ ದೂರು ಕೊಟ್ಟ ಹಿನ್ನೆಲೆಯಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ