newsfirstkannada.com

ಕೇರಳ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೇಲೆ ಕೇಸ್ ದಾಖಲು

Share :

31-10-2023

    ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವೇನು?

    ಸಂಚಲನ ಸೃಷ್ಟಿಸಿದ್ದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪೋಸ್ಟ್!

    ಎರ್ನಾಕುಲಂ ಜಿಲ್ಲೆಯಲ್ಲಿ ಐಪಿಸಿ‌ ಸೆಕ್ಷನ್ 153(a) ಅಡಿ ಕೇಸ್ ದಾಖಲು

ತಿರುವನಂತಪುರಂ: ಕೇರಳದ ಕಲಮಸ್ಸೆರಿಯ ಕನ್ವೆನ್ಷನ್‌ ಸೆಂಟರ್‌ನಲ್ಲಿ ಸಂಭವಿಸಿದ ಸರಣಿ ಬಾಂಬ್‌ ಸ್ಫೋಟ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ. ಕೌಶಲ್ಯ ಅಭಿವೃದ್ಧಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿಕೆಗೆ ಕೆಂಡಾಮಂಡಲರಾಗಿರೋ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕಾನೂನು ಸಮರ ಸಾರಿದ್ದಾರೆ.

ಕೌಶಲ್ಯ ಅಭಿವೃದ್ಧಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಐಪಿಸಿ‌ ಸೆಕ್ಷನ್ 153(a) ಅಡಿ ಕೇಸ್ ದಾಖಲಿಸಲಾಗಿದೆ. ಕೇರಳದಲ್ಲಿ ಕೋಮು ಸಾಮರಸ್ಯ ಕದಡಿದ್ದು, ಧಾರ್ಮಿಕ ದ್ವೇಷ ಹರಡಿರುವುದು ಹಾಗೂ ಗಲಭೆ ಎಬ್ಬಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಎರ್ನಾಕುಲಂ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಈ ಸಂಬಂಧ ಕೇಸ್ ದಾಖಲು ಮಾಡಲಾಗಿದೆ.

ಕೇರಳದಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದ ಘಟನೆಯನ್ನು ಖಂಡಿಸಿದ್ದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು, ಪಿಣರಾಯಿ ವಿಜಯನ್ ಅವರು ಭ್ರಷ್ಟಾಚಾರದಿಂದ ಅಪಖ್ಯಾತಿ ಪಡೆದ ಮುಖ್ಯಮಂತ್ರಿ. ಕೊಳಕು, ನಾಚಿಕೆಯಿಲ್ಲದ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ರಾಜೀವ್ ಚಂದ್ರಶೇಖರ್ ಅವರು, ಕೇರಳದಲ್ಲಿ ಭಯೋತ್ಪಾದಕ ಹಮಾಸ್‌ನ ಜಿಹಾದ್‌ ಕರೆಗಳು ಮುಗ್ಧ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ಉಂಟುಮಾಡುತ್ತಿವೆ. ಆದರೆ, ಇವರು ದೆಹಲಿಯಲ್ಲಿ ಕುಳಿತುಕೊಂಡು ಇಸ್ರೇಲ್ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ರಾಜೀವ್ ಚಂದ್ರಶೇಖರ್ ಅವರ ಈ ಪೋಸ್ಟ್ ಕೇರಳದಲ್ಲಿ ಧಾರ್ಮಿಕ ದ್ವೇಷ ಹರಡುವ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇರಳ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೇಲೆ ಕೇಸ್ ದಾಖಲು

https://newsfirstlive.com/wp-content/uploads/2023/10/Rajeev-Chandrashekar-Kerala-Cm.jpg

Load More