/newsfirstlive-kannada/media/post_attachments/wp-content/uploads/2024/10/KERALA.jpg)
ತಿರುವನಂತಪುರಂ: ದೇವಸ್ಥಾನದಲ್ಲಿ ಸಂಗ್ರಹಿಸಿ ಇಟ್ಟಿದ್ದ ಪಟಾಕಿಗಳು ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನ ನೀಲೇಶ್ವರಂನಲ್ಲಿ ನಡೆದಿದೆ.
ತಡರಾತ್ರಿ ಕೇರಳದ ಕಾಸರಗೋಡಿನ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದ ವೇಳೆ ಈ ದುರ್ಘಟನೆ ನಡೆದಿದೆ. ಪಟಾಕಿಗಳು ಒಮ್ಮಗೆ ಸ್ಫೋಟಗೊಂಡು ಭಾರೀ ಆತಂಕ ಉಂಟು ಆಗಿತ್ತು. ಘಟನೆಯಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ. ಇದರ ಜೊತೆಗೆ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 4 Sabarimala; ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ
/newsfirstlive-kannada/media/post_attachments/wp-content/uploads/2024/10/KERALA_1.jpg)
ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾಸರಗೋಡು, ಕಣ್ಣೂರು ಹಾಗೂ ಮಂಗಳೂರು ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ದೇವಸ್ಥಾನದ ಉತ್ಸವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ದೇವಾಲಯದ ಹೊರಗಿನ ಭಾಗದಲ್ಲೂ ಅಧಿಕ ಸಂಖ್ಯೆಯಲ್ಲಿ ಮಂದಿ ಇದ್ದರು. ಪಟಾಕಿಗಳು ಸ್ಫೋಟವಾಗುವುದನ್ನು ಕಂಡು ಎಲ್ಲರೂ ಭಯಭೀತರಾಗಿದ್ದರು ಎನ್ನಲಾಗಿದೆ.
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆ ಕುರಿತು ಪರಿಶೀಲನೆ ನಡೆಸಿದ್ದಾರೆ. ಇನ್ನು ಪಟಾಕಿಗಳಿಗೆ ಬೆಂಕಿ ಹೇಗೆ ತಗುಲಿತು ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us