/newsfirstlive-kannada/media/post_attachments/wp-content/uploads/2025/02/SUDEEP_DCM.jpg)
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ಕಿಚ್ಚ ಸುದೀಪ್ ಅವರು ಭೇಟಿ ನೀಡಿದ್ದಾರೆ. ಇದೇ ವೇಳೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್- 11ರ ಉದ್ಘಾಟನೆ ಸಮಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕಿಚ್ಚ ಸುದೀಪ್ ಅವರು ಆಹ್ವಾನಿಸಿದ್ದಾರೆ.
ಫೆಬ್ರುವರಿ 8 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಸೀಸನ್- 11ರ ಉದ್ಘಾಟನೆ ಕಾರ್ಯಕ್ರಮ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಆಹ್ವಾನ ಮಾಡಿದ್ದಾರೆ. ಇನ್ನು ಈ ಬಾರಿ ಸುದೀಪ್ ಅವರ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಮುನ್ನಡೆಯಲಿದ್ದು ಟ್ರೋಫಿ ಗೆಲ್ಲುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಇದನ್ನೂ ಓದಿ:Ind vs Eng; ಆಂಗ್ಲರ ಎದೆಯಲ್ಲಿ ಢವಢವ.. ರೋಹಿತ್ ಉರಳಿಸೋ ವಿನ್ನಿಂಗ್ ದಾಳ ಯಾವುದು?
ಉದ್ಯಮಿ ಅಶೋಕ್ ಖೇಣಿಯವರು ತಂಡದ ಮಾಲೀಕರಾಗಿದ್ದು ಸುದೀಪ್ ಅವರ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಟೀಮ್ ಮುನ್ನಡೆಯಲಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಕರ್ನಾಟಕ ಬುಲ್ಡೋಜರ್ಸ್ ಈ ಬಾರಿ ಟ್ರೋಫಿ ಗೆಲ್ಲುವ ನಿರೀಕ್ಷೆಯಿಂದ ಅಖಾಡಕ್ಕೆ ಎಂಟ್ರಿ ಕೊಡುತ್ತಿದೆ. ಮೊದಲ ಪಂದ್ಯ ಬೆಂಗಳೂರಲ್ಲಿ ಫೆ.8 ರಂದು ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಬೆಂಗಾಲ್ ಟೈಗರ್ಸ್ ಸೆಣಸಾಡಲಿವೆ. ಇದರ ನಂತರ 2ನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯವಾಡಲಿವೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇದು ಭಾರತೀಯ ಚಿತ್ರರಂಗದ ವಿವಿಧ ಚಲನಚಿತ್ರೋದ್ಯಮಗಳ ನಟರ ತಂಡಗಳನ್ನು ಒಳಗೊಂಡ ಟೂರ್ನಿಯಾಗಿದೆ. 2025ರ ಟೂರ್ನಿಯಲ್ಲಿ ಒಟ್ಟು 7 ಟೀಮ್ಗಳು ಭಾಗವಹಿಸಲಿವೆ. ಇದರಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಕೂಡ ಒಂದಾಗಿದೆ. ಇದರ ಜೊತೆಗೆ ಭೋಜ್ಪುರಿ ದಬಾಂಗ್ಸ್, ಬೆಂಗಾಲ್ ಟೈಗರ್ಸ್, ತೆಲುಗು ವಾರಿಯರ್ಸ್, ಚೆನ್ನೈ ರೈನೋಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್ ತಂಡಗಳು ಇವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ