/newsfirstlive-kannada/media/post_attachments/wp-content/uploads/2023/11/bigg-boss-2023-11-24T224121.551.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಆರಂಭವಾಗುವ ಸಮಯ ಬಂದಿದೆ. ಇಷ್ಟು ದಿನ ಇದೇ ಬಿಗ್ಬಾಸ್ ಶೋಗಾಗಿ ಕಾಯುತ್ತಿದ್ದ ವೀಕ್ಷಕರಿಗೆ ಗುಡ್ನ್ಯೂಸ್ವೊಂದು ಸಿಕ್ಕಿದೆ. ಕಳೆದ 10 ಸೀಸನ್ಗಳು ಹಾಗೂ ಒಟಿಟಿ 1 ಕಿಚ್ಚ ಸುದೀಪ್ ಅವರ ನೇತೃತ್ವದಲ್ಲಿ ಮೂಡಿ ಬಂದಿತ್ತು.
ಇದನ್ನೂ ಓದಿ: Kabini: ಉಕ್ಕಿ ಹರಿಯುತ್ತಿದ್ದಾಳೆ ಕಪಿಲೆ! ಪರಶುರಾಮ ದೇವಸ್ಥಾನ ಮುಳುಗಡೆ, ಮನೆ ಖಾಲಿ ಮಾಡುತ್ತಿದ್ದಾರೆ ಜನರು
ಈ ಬಾರಿಯ ಬಿಗ್ಬಾಸ್ ಸೀಸನ್ 11 ಶೋವನ್ನು ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡಲಿದ್ದಾರೆ. ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 10 ಯಶಸ್ವಿಯಾಗಿ ಪೂರ್ಣಗೊಂಡಿದೆ. ಮುಂದಿನ ಬಿಗ್ಬಾಸ್ 11 ಶೋ ಯಾವಾಗ ಶುರು ಆಗಬಹುದು ಎಂಬ ಸುಳಿವು ಸಿಕ್ಕಿದೆ. ಇನ್ನು, ಈ ಶೋ ಆರಂಭಿಸಲು ತಯಾರಿ ಕೂಡ ಮಾಡಿಕೊಳ್ಳಲಾಗಿದೆಯಂತೆ. ಈ ಶೋನಲ್ಲಿ ಈ ಬಾರಿ ಯಾರೆಲ್ಲಾ ಸ್ಪರ್ಧೆಗಳು ಬರಲಿದ್ದಾರೆ ಎಂಬುವುದರ ಬಗ್ಗೆ ವೀಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.
View this post on Instagram
ಆದರೆ ಬಿಗ್ಬಾಸ್ ಕನ್ನಡ ಸೀಸನ್ 11 ಶೋ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಆದರೆ ಈ ಹೊಸ ಶೋಗೆ ಯಾರೆಲ್ಲಾ ಸ್ಪರ್ಧಿಗಳು ಬರಬಹುದು ಎಂದು ಅಂದಾಜಿಸಲಾಗಿದೆ. ಸ್ಪರ್ಧಿಗಳ ಆಯ್ಕೆ ಮಾಡೋದು ಕೂಡ ದೊಡ್ಡ ಟಾಸ್ಕ್ ಆಗಿದೆ. ಇಲ್ಲಿ ವಿಭಿನ್ನ ಕಾರ್ಯ ಕ್ಷೇತ್ರಗಳಿಂದ ಬರುವ ಸ್ಪರ್ಧಿಗಳ ಹೊರತಾಗಿ, ವಿಭಿನ್ನ ಮನಸ್ಥಿತಿಯುಳ್ಳವರು ಬೇಕು. ಹಾಗಾಗಿ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯೇ ದೊಡ್ಡದು ಎನ್ನಬಹುದು. ಸದ್ಯ ಎಲ್ಲರ ಚಿತ್ತ ಈಗ ಬಿಗ್ಬಾಸ್ ಕಡೆ ನೆಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ