ಇಂದು ಆರ್ಸಿಬಿ, ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ರೋಚಕ ಪಂದ್ಯ
ಈಡನ್ ಗಾರ್ಡೆನ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ಹೈವೋಲ್ಟೇಜ್ ಮ್ಯಾಚ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್ನ್ಯೂಸ್!
ಕಳೆದ ಒಂದು ವಾರದಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗುತ್ತಿದೆ. ಇಂದು ಕೋಲ್ಕತ್ತಾದಲ್ಲೂ ಜೋರು ಮಳೆ ಆಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈಡೆನ್ ಗಾರ್ಡೆನ್ ಸ್ಟೇಡಿಯಮ್ನಲ್ಲಿ ನಡೆಯಲಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮಧ್ಯೆ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.
ಆರ್ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 7 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರೋಚಕ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್ ಕಾರ್ತಿಕ್, ಫಾಫ್ ಡುಪ್ಲೆಸಿಸ್ ಫಾರ್ಮ್ಗೆ ಬಂದಿದ್ದಾರೆ.
ಇನ್ನು, ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಧ್ಯಾಹ್ನ ಮ್ಯಾಚ್ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3 ಗಂಟೆಯಿಂದ 7ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.
ಇದನ್ನೂ ಓದಿ:
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್