/newsfirstlive-kannada/media/post_attachments/wp-content/uploads/2025/02/RCB-3.jpg)
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇನ್ನೇನು ಮುಂದಿನ ತಿಂಗಳು ಅಂದರೆ ಮಾರ್ಚ್ 22 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. ಎಲ್ಲ ಫ್ರಾಂಚೈಸಿಗಳು ಭರ್ಜರಿ ತಯಾರಿಯಲ್ಲಿವೆ. ಈ ಬಾರಿಯ ಉದ್ಘಾಟನೆ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದ್ದು ಹಾಲಿ ಚಾಂಪಿಯನ್ ಆಗಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯಲಿದೆ.
ಈ ಸಲ ಕಪ್ ಗೆಲ್ಲುವ ನಿರೀಕ್ಷೆಯಲ್ಲಿರುವ ಆರ್ಸಿಬಿ ರಜತ್ ಪಾಟೀದಾರ್ ಅವರನ್ನು ಕ್ಯಾಪ್ಟನ್ ಆಗಿ ಘೋಷಣೆ ಮಾಡಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ವಿರುದ್ಧ ಆರ್ಸಿಬಿ ಸೆಣಸಾಟ ನಡೆಸಲಿದೆ. ಕಳೆದ ಬಾರಿ ರನ್ನರ್ ಅಪ್ ಆಗಿದ್ದ ಸನ್ರೈಸರ್ಸ್ ಹೈದ್ರಾಬಾದ್ ಮೊದಲ ಪಂದ್ಯವನ್ನು ಮಾರ್ಚ್ 23 ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಈ ಪಂದ್ಯವು ಹೈದ್ರಾಬಾದ್ ತಂಡದ ತವರು ನೆಲವಾದ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಮಧ್ಯಾಹ್ನ ನಡೆಯಲಿದೆ.
ಐಪಿಎಲ್ ಇನ್ನೇನು ಆರಂಭವಾಗಲು ಕೆಲವು ದಿನಗಳು ಮಾತ್ರ ಉಳಿದಿದ್ದರೂ ಬಿಸಿಸಿಐ ಇನ್ನು ಅಧಿಕೃತವಾದ ವೇಳಾಪಟ್ಟಿ ಬಿಡುಗಡೆ ಮಾಡಿಲ್ಲ. ಇನ್ನೇನು ಎರಡ್ಮೂರು ದಿನಗಳಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ಪಂದ್ಯ ನಡೆಯುವ ಅನೌಪಚಾರಿಕವಾದ ಸಮಯ, ದಿನಾಂಕಗಳನ್ನು ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ಶೇರ್ ಮಾಡಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ಕೆಲವೊಂದು ಪಂದ್ಯಗಳು ನಡೆಯುವ ಸ್ಥಳ, ದಿನಾಂಕ ಬಹಿರಂಗಗೊಳ್ಳುತ್ತಿವೆ ಎಂದು ಹೇಳಲಾಗಿದೆ.
2025ರ 18ನೇ ಆವೃತ್ತಿಯ ಫೈನಲ್ ಪಂದ್ಯವನ್ನು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲೇ ಆಯೋಜನೆ ಮಾಡಲಾಗಿದೆ. ಈ ಫೈನಲ್ ಪಂದ್ಯವು ಮೇ 25 ರಂದು ಭಾನುವಾರದಂದು ನಡೆಯಲಿದೆ ಎಂದು ತಿಳಿಸಲಾಗಿದೆ. ಅಹಮದಾಬಾದ್, ಮುಂಬೈ, ಚೆನ್ನೈ, ಬೆಂಗಳೂರು, ಲಕ್ನೋ, ಮುಲ್ಲನ್ಪುರ್, ದೆಹಲಿ, ಜೈಪುರ, ಕೋಲ್ಕತ್ತಾ, ಹೈದರಾಬಾದ್ನಲ್ಲಿ ಪಂದ್ಯ ನಡೆಯಲಿವೆ. ಇದರ ಜೊತೆಗೆ ಈ ಸಲ ಗುವಾಹಟಿ ಹಾಗೂ ಧರ್ಮಶಾಲಾ ಸ್ಟೇಡಿಯಂಲ್ಲಿಯೂ ಐಪಿಎಲ್ ಪಂದ್ಯಗಳು ನಡೆಯಲಿವೆ.
ಇದನ್ನೂ ಓದಿ:ನಮ್ಮ ಮೆಟ್ರೋ ಈ ಮಾರ್ಗಗಳಲ್ಲಿ ಟಿಕೆಟ್ ಬೆಲೆ ಕಡಿಮೆ ಮಾಡಿಲ್ಲ
ಫ್ಲೇ ಆಫ್ನ ಕ್ವಾಲಿಫಯರ್- 1 ಹಾಗೂ ಎಲಿಮಿನೇಟರ್ ಪಂದ್ಯಗಳು ಹೈದ್ರಾಬಾದ್ ಸ್ಟೇಡಿಯಂನಲ್ಲಿ ನಡೆಯಲಿವೆ. ಕ್ವಾಲಿಫಯರ್- 2 ಹಾಗೂ ಫೈನಲ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿವೆ. ನಿಗದಿಯಂತೆ ಮೇ 25 ರಂದು ಫೈನಲ್ ಪಂದ್ಯವನ್ನು ಆಯೋಜನೆ ಮಾಡಲಾಗಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ