/newsfirstlive-kannada/media/post_attachments/wp-content/uploads/2025/03/KKR-vs-RCB.jpg)
ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಕ್ಷಣಗಣನೆ ಶುರುವಾಗಿದೆ. ನಾಳೆ ನಡೆಯಲಿರೋ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗಲಿವೆ.
ಇನ್ನು, ಕೆಕೆಆರ್, ಆರ್‌ಸಿಬಿ ಹೈವೋಲ್ಟೇಜ್ ಪಂದ್ಯಕ್ಕಾಗಿ ಎದುರು ನೋಡುತ್ತಿವೆ. ವರದಿಗಳ ಪ್ರಕಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯಬೇಕಿರೋ ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆ. ಹೀಗಾಗಿ ಪಂದ್ಯ ನಡೆಯುವುದು ಡೌಟ್ ಆಗಿದೆ.
ಪಂದ್ಯಕ್ಕೆ ಮಳೆ ಅಡ್ಡಿ
ನಾಳೆ ಮಾರ್ಚ್ 22ನೇ ತಾರೀಕು ಕೋಲ್ಕತ್ತಾದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಸಿಲಾಗಿದೆ.
ಬಂಗಾಳಕೊಲ್ಲಿಯಿಂದ ಕೆಳ ಉಷ್ಣವಲಯದ ಮಟ್ಟದಲ್ಲಿ ಗಾಳಿ ಮತ್ತು ತೇವಾಂಶ ಇದೆ. ಇದರ ಪರಿಣಾಮ ಸತತ 2 ದಿನಗಳ ಕಾಲ ಪಶ್ಚಿಮ ಬಂಗಾಳದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದ್ದು, ಐಪಿಎಲ್ 2025ರ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.
ಆರ್‌ಸಿಬಿ ತಂಡ ಹೀಗಿದೆ!
ರಜತ್ ಪಾಟಿದಾರ್ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ದಾರ್, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಾಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ಇದನ್ನೂ ಓದಿ:IPL ಬೌಲರ್ಸ್ಗೆ ಗುಡ್ನ್ಯೂಸ್.. ಬಾಲ್ಗೆ ಎಂಜಲು ಹಚ್ಚಲು ಬಿಸಿಸಿಐ ಅನುಮತಿ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್