/newsfirstlive-kannada/media/post_attachments/wp-content/uploads/2025/03/bus-accident.jpg)
ರಾಯಚೂರು: ಕೆಕೆಆರ್‌ಟಿಸಿ ಬಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಉಸಿರು ಚೆಲ್ಲಿದ ಘಟನೆ ಆಂಧ್ರಪ್ರದೇಶದ ಆದೋನಿ ತಾಲೂಕಿನ ಪಾಂಡವಗಲ ಗ್ರಾಮದ ಬಳಿ ನಡೆದಿದೆ. ಮಾನ್ವಿ ಮೂಲದ ಹೇಮಾದ್ರಿ (55), ಪತ್ನಿ ನಾಗರತ್ನಮ್ಮ (44), ಪುತ್ರ ದೇವರಾಜು(24), ಆದೋನಿ ತಾಲೂಕಿನ ಕುಪ್ಪಗಲು ಗ್ರಾಮದ ಪತಿ ಈರಣ್ಣ (40), ಪತ್ನಿ ಆದಿಲಕ್ಷ್ಮಿ (30) ಮೃತ ದುರ್ದೈವಿಗಳಾಗಿದ್ದಾರೆ.
ಇದನ್ನೂ ಓದಿ: ನಾಳೆಯಿಂದ ಬೆಂಗಳೂರಲ್ಲಿ RCB ಕ್ಯಾಂಪ್ ಆರಂಭ.. ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್!
ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಕೆಕೆಆರ್‌ಟಿಸಿ ಬಸ್ ಗಂಗಾವತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿತ್ತು. ಅದೇ ಮಾರ್ಗದಿಂದ ಆದೋನಿಗೆ ಮಾನ್ವಿ ಮೂಲದ ಹೇಮಾದ್ರಿ ಕುಟುಂಬ ತೆರಳುತ್ತಿತ್ತು. ಮತ್ತೊಂದು ಬೈಕ್‌ನಲ್ಲಿ ಕುಪ್ಪಗಲ್ಲು ಗ್ರಾಮದ ಕಡೆ ಹೊರಟಿದ್ದ ಈರಣ್ಣ ಕುಟುಂಬ ಹೋಗುತ್ತಿತ್ತು. ಈ ವೇಳೆ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ 5 ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಇನ್ನೂ, ಕೆಕೆಆರ್‌ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆದ್ರೆ ಬೈಕ್‌ಗಳಿಗೆ ಗುದ್ದಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆದೋನಿ ಪೊಲೀಸರು ಹಾಗೂ ಕೆಕೆಆರ್‌ಟಿಸಿ ರಾಯಚೂರು ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಚಂದ್ರಶೇಖರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಆದೋನಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ