ಟೀಮ್ ಇಂಡಿಯಾ ಬರೋಬ್ಬರಿ 6 ತಿಂಗಳ ನಂತರ ಟೆಸ್ಟ್ ಸೀರೀಸ್ಗೆ ಕಮ್ಬ್ಯಾಕ್!
ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ
ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟ
ಬಾಂಗ್ಲಾ ಎದುರಿನ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟವಾಗಿದೆ. ರೋಹಿತ್ ಶರ್ಮಾ ನಾಯಕತ್ವದ 16 ಸದಸ್ಯರ ಬಲಿಷ್ಠ ತಂಡವನ್ನೇ ಸೆಲೆಕ್ಷನ್ ಕಮಿಟಿ ಪ್ರಕಟಿಸಿದೆ. ಈ ಟೆಸ್ಟ್ ಸರಣಿಯಲ್ಲಿ ನಿರೀಕ್ಷೆಯಂತೆ ಸ್ಟಾರ್ ಆಟಗಾರರು ಕಾಣಿಸಿಕೊಂಡಿದ್ರೆ, ಕೆಲ ಆಟಗಾರರಿಗೆ ತಂಡದಿಂದ ಕೊಕ್ ನೀಡಲಾಗಿದೆ.
ಸೆಪ್ಟೆಂಬರ್ 19ನೇ ತಾರೀಕಿನಿಂದ ಚೆನ್ನೈನಲ್ಲಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿ ಆರಂಭವಾಗಲಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯದಾಗಿ ಭಾರತ ತಂಡ ಟೆಸ್ಟ್ ಸರಣಿ ಆಡಿತ್ತು. ಟೀಮ್ ಇಂಡಿಯಾ ಈ ಸರಣಿಯನ್ನು 4-1ರ ಅಂತರದಲ್ಲಿ ಗೆದ್ದಿತ್ತು. ಈಗ ಸತತ 6 ತಿಂಗಳ ಬಳಿಕ ಟೀಮ್ ಇಂಡಿಯಾ ರೆಡ್ ಬಾಲ್ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದೆ. ಇತ್ತೀಚೆಗಷ್ಟೇ ಬಾಂಗ್ಲಾದೇಶ ಪಾಕಿಸ್ತಾನ ವಿರುದ್ಧ ನಡೆದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತ್ತು. ಹಾಗಾಗಿ ಅಳೆದು ತೂಗಿ ಬಿಸಿಸಿಐ ಸೆಲೆಕ್ಷನ್ ಕಮಿಟಿ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದೆ.
ಕೆ.ಎಲ್ ರಾಹುಲ್ ಕಮ್ಬ್ಯಾಕ್!
16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಇನ್ನು ಮಿಡಲ್ ಆರ್ಡರ್ ಬ್ಯಾಟರ್ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್ರೌಂಡರ್ ಕೋಟಾದದಲ್ಲಿ ಆರ್.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವಕಾಶ ಪಡೆದಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಜೊತೆ ಯಶ್ ದಯಾಳ್ ಕಾಣಿಸಿಕೊಂಡಿದ್ದಾರೆ. ದುಲೀಪ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಅವಕಾಶ ನೀಡಲಾಗಿದೆ.
ಬಾಂಗ್ಲಾ ವಿರುದ್ಧದ ಟೆಸ್ಟ್ಗೆ ಟೀಮ್ ಇಂಡಿಯಾ ಹೀಗಿದೆ!
ರೋಹಿತ್ ಶರ್ಮಾ (ಕ್ಯಾಪ್ಟನ್), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಧೃವ್ ಜುರೇಲ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.
ಇದನ್ನೂ ಓದಿ: ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ; ಸ್ಟಾರ್ ಆಟಗಾರರಿಗೆ ಕೊಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ