/newsfirstlive-kannada/media/post_attachments/wp-content/uploads/2025/03/KL-RAHUL-4.jpg)
ಇಂದು ವಿಶಾಖಪಟ್ಟಣಂ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ 2025ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 4ನೇ ಪಂದ್ಯ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿವೆ. ಇದರ ಮಧ್ಯೆ ಕೆ.ಎಲ್​​ ರಾಹುಲ್​ ಬಗ್ಗೆ ಅಪ್ಡೇಟ್​ ಒಂದು ಸಿಕ್ಕಿದೆ.
2024ರ ಐಪಿಎಲ್​ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಿದ್ದ ಕೆಎಲ್ ರಾಹುಲ್ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಲಕ್ನೋ ಸೂಪರ್​ ಜೈಂಟ್ಸ್​ ತಂಡವನ್ನು ತೊರೆದ ಕೆ.ಎಲ್​ ರಾಹುಲ್​​ ಐಪಿಎಲ್​ ಹರಾಜಿಗೆ ಬಂದಿದ್ದರು. ಇವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 14 ಕೋಟಿ ರೂಪಾಯಿ ನೀಡಿ ಖರೀದಿ ಮಾಡಿದೆ. ಆದರೀಗ, ಕೆ.ಎಲ್​ ರಾಹುಲ್​​ ಇಂದು ಸೇರಿ ಮೂರು ಪಂದ್ಯಗಳಿಗೆ ಲಭ್ಯರಿಲ್ಲ ಎಂದು ವರದಿಯಾಗಿದೆ.
/newsfirstlive-kannada/media/post_attachments/wp-content/uploads/2024/05/KL-Rahul-8.jpg)
ಕೆ.ಎಲ್​ ರಾಹುಲ್​ ಅಲಭ್ಯತೆಗೆ ಕಾರಣವೇನು?
ಇತ್ತೀಚೆಗೆ ನಡೆದ 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡದ ಪರ ಸ್ಥಿರ ಪ್ರದರ್ಶನ ನೀಡಿ ಭರವಸೆ ಮೂಡಿಸಿದವರು ಕೆಎಲ್ ರಾಹುಲ್. ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಲ್ಲಿ ಅಬ್ಬರಿಸಿ ಎಲ್ಲರ ಗಮನ ಸೆಳೆದಿದ್ದರು. ಈಗ ಕೌಟುಂಬಿಕ ಕಾರಣಗಳಿಂದ ಇವರು ಐಪಿಎಲ್‌ನ ಮೊದಲ ಮೂರು ಪಂದ್ಯಗಳು ಆಡೋದು ಡೌಟ್​​ ಎಂದು ತಿಳಿದು ಬಂದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಈಗಾಗಲೇ ಕೆ.ಎಲ್​ ರಾಹುಲ್​ ಕಮಾಲ್​ ಮಾಡಿದ್ದಾರೆ. ಕೆಎಲ್ 132 ಐಪಿಎಲ್ ಪಂದ್ಯಗಳಲ್ಲಿ ಒಟ್ಟು 4686 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳು ಮತ್ತು 37 ಅರ್ಧಶತಕಗಳು ಸೇರಿವೆ.
ಡೆಲ್ಲಿ ತಂಡ ಹೀಗಿದೆ!
ಜೇಕ್ ಫ್ರೇಸರ್-ಮೆಕ್‌ಗರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ಮಿಚೆಲ್ ಸ್ಟಾರ್ಕ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಟಿ ನಟರಾಜನ್, ಕರುಣ್ ನಾಯರ್, ಮೋಹಿತ್ ಶರ್ಮಾ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us