ಹೈದರಾಬಾದ್ ವಿರುದ್ಧ ಲಕ್ನೋ ತಂಡಕ್ಕೆ ಹೀನಾಯ ಸೋಲು
ಕ್ಯಾಪ್ಟನ್ ರಾಹುಲ್ ಮೇಲೆ ಲಕ್ನೋ ಟೀಮ್ ಮಾಲೀಕ ಕೂಗಾಟ
ಮತ್ತೆ ಆರ್ಸಿಬಿಗೆ ಬನ್ನಿ ಎಂದು ಕೆ.ಎಲ್ ರಾಹುಲ್ಗೆ ಒತ್ತಾಯ!
ಇತ್ತೀಚೆಗೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋಲನ್ನಪ್ಪಿತ್ತು.
ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.
ಹೈದರಾಬಾದ್ ಪರ ಅಗ್ರೆಸ್ಸಿವ್ ಬ್ಯಾಟಿಂಗ್ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್, 8 ಫೋರ್ ಸಮೇತ 89 ರನ್ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.
ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
Come To RCB #KLRahul ❤️
Bring Namma Boy @RCBTweets #LSGvsSRH #RCBvsPBKS #PBKSvsRCB #IPL2024 pic.twitter.com/7bA6npXivX— RCBIANS OFFICIAL (@RcbianOfficial) May 9, 2024
ಬ್ರಿಂಗ್ ಕೆ.ಎಲ್ ರಾಹುಲ್ ಹೋಮ್!
ಇನ್ನು, ಸೋಷಿಯಲ್ ಮೀಡಿಯಾದಲ್ಲಿ ಕೆ.ಎಲ್ ರಾಹುಲ್ ಅವರನ್ನು ಆರ್ಸಿಬಿ ಕರೆ ತನ್ನಿ ಎಂದು ಫ್ಯಾನ್ಸ್ ಆಕ್ರೋಶ ಹೊರಹಾಕಿದ್ದಾರೆ. ನಿನಗೆ ಲಕ್ನೋ ಟೀಮ್ ಬೇಡ, ಆರ್ಸಿಬಿಗೆ ಮತ್ತೆ ವಾಪಸ್ ಬಾ ಎಂದು ಟ್ರೆಂಡ್ ಮಾಡುತ್ತಿದ್ದಾರೆ.
ಇದನ್ನೂ ಓದಿ: ಇಂದಿನ ಆರ್ಸಿಬಿ, ಪಂಜಾಬ್ ನಡುವಿನ ಐಪಿಎಲ್ ಪಂದ್ಯ ರದ್ದು? ಕಾರಣವೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್