/newsfirstlive-kannada/media/post_attachments/wp-content/uploads/2024/10/Team-India-2.jpg)
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸೀರೀಸ್ನಲ್ಲಿ ರನ್ ಬರ ಎದುರುಸುತ್ತಿರೋ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಕೊನೆಯ ಟೆಸ್ಟ್ನಿಂದ ಹಿಂದೆ ಸರಿದಿದ್ದಾರೆ. ಇದರ ಪರಿಣಾಮ ಟೀಮ್ ಇಂಡಿಯಾ ಮುನ್ನಡೆಸುವ ಜವಾಬ್ದಾರಿ ಬುಮ್ರಾ ಹೆಗಲ ಮೇಲಿದೆ.
ಇದುವರೆಗೂ ಟೀಮ್ ಇಂಡಿಯಾ ಸ್ಟಾರ್ ವೇಗಿ 5 ಪಂದ್ಯಗಳಲ್ಲಿ ಕ್ಯಾಪ್ಟನ್ಸಿ ಮಾಡಿದ್ದಾರೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬುಮ್ರಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆಲುವಿನ ದಡ ಸೇರಿತ್ತು. ಹೀಗಾಗಿ ರೋಹಿತ್ ಕೊನೆಯ ಟೆಸ್ಟ್ನಿಂದ ದೂರ ಉಳಿದಿದ್ದು, ಬುಮ್ರಾ ಹೆಗಲಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ಆದರೀಗ, ಬುಮ್ರಾ ಗಾಯಕ್ಕೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ. ಇವರ ಬದಲಿಗೆ ಟೀಮ್ ಇಂಡಿಯಾ ನಾಯಕತ್ವವನ್ನು ಸ್ಟಾರ್ ಆಟಗಾರ ಕೊಹ್ಲಿ ವಹಿಸಿಕೊಂಡಿದ್ದಾರೆ.
ಭರ್ಜರಿ ಪಾರ್ಮ್‌ನಲ್ಲಿರೋ ಬುಮ್ರಾ ಬೌಲಿಂಗ್ ಮಾತ್ರವಲ್ಲ ನಾಯಕತ್ವದಲ್ಲೂ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಬುಮ್ರಾ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ 32 ವಿಕೆಟ್ ಪಡೆದಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಬುಮ್ರಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು. ಈಗ ಇವರು 2ನೇ ಇನ್ನಿಂಗ್ಸ್ಗೆ ಕಮ್ಬ್ಯಾಕ್ ಮಾಡೋದು ಅನುಮಾನ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.
ಕೊಹ್ಲಿಗೆ ಟೀಮ್ ಇಂಡಿಯಾ ಕ್ಯಾಪ್ಟನ್ಸಿ
ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ಟೆಸ್ಟ್ ಕ್ಯಾಪ್ಟನ್. ಇವರು 2 ವರ್ಷಗಳ ಹಿಂದೆ ಟೀಮ್ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿಗೆ ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದರು. ಈಗ ಬುಮ್ರಾ ಅನುಪಸ್ಥಿಯಲ್ಲಿ ಕೊಹ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಅವಕಾಶ ಸಿಕ್ಕಿದೆ. ಇವರು ಭಾರತ ತಂಡದ ಸ್ಯಾಂಡ್ ಇನ್ ಕ್ಯಾಪ್ಟನ್ ಆಗಿದ್ದು, ಫ್ಯಾನ್ಸ್ಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ.
ಇದನ್ನೂ ಓದಿ:ಟೀಮ್ ಇಂಡಿಯಾಗೆ ಶಾಕ್ ಮೇಲೆ ಶಾಕ್ ಕೊಟ್ಟ ಬುಮ್ರಾ; ಭಾರತದ ಮುಂದಿನ ನಡೆಯೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ