newsfirstkannada.com

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಬಿದ್ದ ಮರ.. ಓರ್ವ ಸಾವು, ಮತ್ತೊಬ್ಬ ಗಂಭೀರ

Share :

Published May 8, 2024 at 1:15pm

  ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಡೆದ ಅವಘಡ

  ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಉರುಳಿ ಬಿದ್ದಿರುವ ಮರ

  ರಾತ್ರಿ ಸುರಿದ ಭಾರೀ ಮಳೆಗೆ ಮರ ಉರುಳಿ ಬಿದ್ದು ವ್ಯಕ್ತಿ ಸಾವು

ಕೋಲಾರ: ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ.

ಇದನ್ನೂ ಓದಿ: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್​ನಲ್ಲಿ ಮೊಬೈಲ್ ಇಟ್ಟು ವಿಡಿಯೋ.. ಅಪ್ರಾಪ್ತ ಅರೆಸ್ಟ್​

ಇಬ್ಬರು ವ್ಯಕ್ತಿಗಳು ಬೆಳಗ್ಗೆ 8 ಗಂಟೆ ಸುಮಾರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್​ನಲ್ಲಿದ್ದ ಇಬ್ಬರ ಪೈಕಿ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ತೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯು ಕೋಲಾರದ- ತಮಿಳುನಾಡಿನ ಗಡಿ ಭಾಗದಲ್ಲಿ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಬಿದ್ದ ಮರ.. ಓರ್ವ ಸಾವು, ಮತ್ತೊಬ್ಬ ಗಂಭೀರ

https://newsfirstlive.com/wp-content/uploads/2024/05/KLR_RAIN-1.jpg

Load More