newsfirstkannada.com

ಚೂರಿ ಜೊತೆಗೆ ಲೇಡೀಸ್​ ಪಿಜಿಗೆ ನುಗ್ಗಿದ ಯುವಕ.. ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಎಸ್ಕೇಪ್

Share :

Published July 24, 2024 at 7:51am

    ಚಾಕು ಹಿಡಿದುಕೊಂಡು ಲೇಡೀಸ್​ ಪಿಜಿಗೆ ಬಂದ ಯುವಕ

    ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯ ಕೊಲೆ

    ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನಿಗಾಗಿ ಪೊಲೀಸರ ಹುಡುಕಾಟ

ಬೆಂಗಳೂರು: ಲೇಡೀಸ್​ ಪಿಜಿಗೆ ನುಗ್ಗಿ ಯುವತಿಯೊಬ್ಬಳನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಮೃತ ಯುವತಿಯನ್ನ ಬಿಹಾರ ಮೂಲದ ಕೃತಿ ಕುಮಾರಿ‌ ಎಂದು ಗುರುತಿಸಲಾಗಿದೆ.

ಕೋರಮಂಗಲದ ವಿಆರ್ ಲೇಔಟ್​ನಲ್ಲಿರೋ ಪಿಜಿಯಲ್ಲಿ ರಾತ್ರಿ 11.10 ರಿಂದ 11.30 ಸುಮಾರಿಗೆ ಕೃತ್ಯ ನಡೆದಿದೆ. ಚಾಕುವಿನ ಜೊತೆಗೆ ಆಗಮಿಸಿದ್ದ ಯುವಕ, ಮೂರನೇ ಮಹಡಿಯಲ್ಲಿರುವ ರೂಂ ಸಮೀಪ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಚನ್ನಪಟ್ಟಣ ಮೇಲೆ ಕೈ ನಾಯಕರ ಕಣ್ಣು, ಉಪಚುನಾವಣೆ ಗೆಲ್ಲಲು ಕಸರತ್ತು; ಅಖಾಡಕ್ಕೆ ಇಳಿದ ಸಿಎಂ ಸಿದ್ದರಾಮಯ್ಯ

ಕೃತಿ ಕುಮಾರಿ‌ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಕೋರಮಂಗಲದ ಬಳಿ ಪಿಜಿಯಲ್ಲಿ ವಾಸವಿದ್ದಳು.

ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಹಚ್ಚುವ ಕಾರ್ಯ ಆರಂಭಗೊಂಡಿದೆ.

ಇದನ್ನೂ ಓದಿ: ಪ್ರೇಮಿಗಳಿಗಾಗಿ ತಯಾರಾಗಿದೆ ಟು ಇನ್​ ಒನ್​​ ಛತ್ರಿ.. ನಿಮ್ಮ ಪ್ರೇಯಸಿಗಾಗಿ ಖರೀದಿ ಮಾಡಿ!\

ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎಂಬ ಆರೋಪವೂ ಕೇಳಿ ಬಂದಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚೂರಿ ಜೊತೆಗೆ ಲೇಡೀಸ್​ ಪಿಜಿಗೆ ನುಗ್ಗಿದ ಯುವಕ.. ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಎಸ್ಕೇಪ್

https://newsfirstlive.com/wp-content/uploads/2024/07/Kormangala-1.jpg

Load More