newsfirstkannada.com

ಬಾಲರಾಮ ಪ್ರಾಣ ಪ್ರತಿಷ್ಠಾಪನೆ: ಸೋಮವಾರ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆಗೆ ಆಗ್ರಹ

Share :

Published January 19, 2024 at 7:33pm

  ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ

  ಜನವರಿ 22 ರಂದು ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ಪತ್ರ

  ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕೋಟ ಶ್ರೀನಿವಾಸ ಪೂಜಾರಿ!

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯಗೆ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿದ್ದಾರೆ.

22ನೇ ತಾರೀಕಿನಂದು ಸೋಮವಾರ ಅಯೋಧ್ಯೆಯಲ್ಲಿ ಐತಿಹಾಸಿಕ ರಾಮ ಮಂದಿರ ಪ್ರಾಣಪ್ರತಿಷ್ಠಾನ ಉದ್ಘಾಟನಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಲಿದೆ. ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಣ್ತುಂಬಿಕೊಳ್ಳಲು ಇಡೀ ದೇಶ ಕಾಯುತ್ತಿದೆ. ಹೀಗಾಗಿ ಅಂದು ನಾಡಿನ ಜನತೆಗೆ ಈ ಹಬ್ಬ ಆಚರಿಸಲು ಸರ್ಕಾರ ರಜೆ ಘೋಷಣೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಇನ್ನು, ಈಗಾಗಲೇ ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭ ಸೋಮವಾರ ನಡೆಯಲಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಾಲರಾಮ ಪ್ರಾಣ ಪ್ರತಿಷ್ಠಾಪನೆ: ಸೋಮವಾರ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆಗೆ ಆಗ್ರಹ

https://newsfirstlive.com/wp-content/uploads/2024/01/RAMA-9.jpg

Load More