/newsfirstlive-kannada/media/post_attachments/wp-content/uploads/2025/02/KPSC-3.jpg)
ಬೆಂಗಳೂರು: ಕೆಪಿಎಸ್ಸಿ (ಕರ್ನಾಟಕ ಲೋಕಸೇವಾ ಆಯೋಗ: KPSC) 384 ಹುದ್ದೆಗಳ ಮುಖ್ಯ ಪರೀಕ್ಷೆ ಅಧಿಸೂಚನೆಗೆ KAT (ಕರ್ನಾಟಕ ಆಡಳಿತ ನ್ಯಾಯಮಂಡಳಿ) ತಡೆ ನೀಡಿದೆ.
ಕರ್ನಾಟಕ ಲೋಕ ಸೇವಾ ಆಯೋಗ ನಡೆಸುತ್ತಿರುವ 2023-2024ನೇ ಸಾಲಿನ ಗ್ರೂಪ್ ಎ ಮತ್ತು ಬಿ ವರ್ಗದ 384 ಹುದ್ದೆಗಳಿಗೆ ಪರೀಕ್ಷೆ ನಡೆಸಲು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಯನ್ನು ಅಮಾನತಿನಲ್ಲಿಡಲು ಕೆಎಟಿ ಮಧ್ಯಂತರ ಆದೇಶ ನೀಡಿದೆ.
ನೇಮಕಾತಿ ಪ್ರಕ್ರಿಯೆ ಪ್ರಶ್ನಿಸಿ ಡಿ ಪವಿತ್ರ ಸೇರಿದಂತೆ 51 ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ ಮೆಟ್ಟಿಲೇರಿದ್ದಾರೆ.
ವಿಚಾರಣೆ ನಡೆಸಿದ ಕೋರ್ಟ್, ಮುಂದಿನ ವಿಚಾರಣೆ ಆದೇಶದವರೆಗೂ ನೇಮಕಾತಿ ಪ್ರಕ್ರಿಯೆಯನ್ನು ಅಮಾನತಿನಲ್ಲಿಡಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿದೆ. ನ್ಯಾಯಾಂಗ ಸದಸ್ಯರಾದ ಎಸ್ವೈ ವಟವಟಿ ಮತ್ತು ಆಡಳಿತ ಸದಸ್ಯೆ ಡಾ ಅಮಿತ್ ಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಮುಖ್ಯ ಪರೀಕ್ಷೆ ನಡೆಸಲು ಕೆಪಿಎಸ್ಸಿ ಜನವರಿ 29 ರಂದು ಅಧಿಸೂಚನೆ ಹೊರಡಿಸಿತ್ತು.
ಇದನ್ನೂ ಓದಿ: Champions Trophy; ಭಾರತ ಶುಭಾರಂಭ, ಗಿಲ್ ಸೆಂಚುರಿ.. ಕನ್ನಡಿಗನ ವಿನ್ನಿಂಗ್ ಶಾಟ್ ಹೇಗಿತ್ತು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ