newsfirstkannada.com

×

ಪುನೀತ್ ಕೆರೆಹಳ್ಳಿ ಬಗ್ಗೆ ಪ್ರಶ್ನೆ; ಸದನದಲ್ಲಿ ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಕೆಂಡಾಮಂಡಲ

Share :

Published July 12, 2023 at 4:31pm

    ಸದನದಲ್ಲಿ ಪುನೀತ್​​ ಕೆರೆಹಳ್ಳಿ ಬಗ್ಗೆ ಬಿಜೆಪಿ ಪ್ರಶ್ನೆ

    "ಕಲಾಪದ ಸಮಯ ಯಾಕೆ ಹಾಳು ಮಾಡ್ತೀರಿ"

    ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಕಿಡಿ..!

ಬೆಂಗಳೂರು: “ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು, ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದೊಂದೆ ಬಿಜೆಪಿ ನಾಯಕರ ಕೆಲಸ” ಎಂದು ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದರು.

ಕೊಲೆ ಕೇಸ್​ವೊಂದರ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್ ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು.

ಬುಧವಾರ ವಿಧಾನ ಪರಿಷತ್ ಶೂನ್ಯ ಕಲಾಪದ ವೇಳೆ ವಿರೋಧ ಪಕ್ಷದ ನಾಯಕರು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರಕರಣ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, “ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?” ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಸರ್ಕಾರದ ಪರವಾಗಿ ಉತ್ತರ ನೀಡಲು ಮುಂದಾದ ಸಚಿವ ಕೃಷ್ಣಭೈರೇಗೌಡ ಅವರು, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ.‌ ಸಂಬಂಧಿಸಿ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಉತ್ತರಕ್ಕೆ ಪಟ್ಟು ಹಿಡಿದ ವಿಪಕ್ಷ ನಾಯಕರು

ಆದರೆ ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ಈಗಾಗಲೇ ಉತ್ತರ ಬೇಕು‌ ಎಂದು ಪಟ್ಟುಹಿಡಿದರು. ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ ” ಸದನದ ನಿಯನ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿದರು. ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಿದರು. ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಸಚಿವರು ಈಗಲೇ ಉತ್ತರ ನೀಡಬೇಕು ಎಂದು ಪಟ್ಟುಹಿಡಿದರು. ಸದನದಲ್ಲಿ ಗದ್ದಲ ಉಂಟಾಗಿತ್ತು.

ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ

ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಭೈರೇಗೌಡ, ” ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ.

ಇವರಿಗೆ ಸದನ ನಡೆಯುವುದು ಅಗತ್ಯವಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರು ಸತ್ಯವೇನು? ಎಂಬುದು ಜನರಿಗೆ ಗೊತ್ತು” ಎಂದು ವಾಗ್ದಾಳಿ ನಡೆಸಿದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪುನೀತ್ ಕೆರೆಹಳ್ಳಿ ಬಗ್ಗೆ ಪ್ರಶ್ನೆ; ಸದನದಲ್ಲಿ ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಕೆಂಡಾಮಂಡಲ

https://newsfirstlive.com/wp-content/uploads/2023/07/Krishna-Byre-Gowda.jpg

Load More