ತಮಿಳುನಾಡಿಗೆ ಹರಿದ ಕಾವೇರಿ.. ಅನ್ನದಾತರು ನಿಗಿನಿಗಿ!
KRS ಜಲಾಶಯದ ಬಳಿ ಮಂಡ್ಯ ರೈತರಿಂದ ಪ್ರತಿಭಟನೆ
ರೈತರ ಪ್ರತಿಭಟನೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಥ್
ಕಾವೇರಿ ನೀರಿಗಾಗಿ ಖ್ಯಾತೆ ತೆಗೆದ ತಮಿಳುನಾಡು, ಸುಪ್ರೀಂ ಮೆಟ್ಟಿಲೇರಿದೆ. ಇತ್ತ, ರಾಜ್ಯ ಸರ್ಕಾರ ಕೂಡ ನೀರನ್ನು ಬಿಟ್ಟಿದೆ. ಇದು ಅನ್ನದಾತರ ಪಿತ್ತ ನೆತ್ತಿಗೇರಿಸಿದ್ದು, ಪ್ರತಿಭಟನೆ ಹಾದಿ ತುಳಿದಿದ್ದಾರೆ. ಇನ್ನು, ಈ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ಶುರುವಾಗಿದೆ. ರಾಜ್ಯ ಸರ್ಕಾರ ಒಂದು ರೀತಿ ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿದೆ. ಒಂದೆಡೆ ಕಾವೇರಿ ನೀರಿಗಾಗಿ ತಮಿಳುನಾಡಿನ ಖ್ಯಾತೆ. ಮತ್ತೊಂದೆಡೆ ನಮ್ಮ ರೈತರ ಹಿತವನ್ನು ಕಾಪಾಡಬೇಕಾದ ಆದ್ಯತೆ. ಹೀಗಾಗಿ ಇಕ್ಕಟ್ಟಿನಲ್ಲಿರುವ ರಾಜ್ಯ ಸರ್ಕಾರ, ಅನಿವಾರ್ಯತೆಯಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಇದು ಕಾವೇರಿ ಭಾಗದ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಕಾವೇರಿ ಜಲಾನಯನ ಭಾಗದಲ್ಲಿ ಮುಂಗಾರು ಮಳೆಗೆ ಕೈಕೊಟ್ಟ ಕಾರಣ, ಕಾವೇರಿ ಭಾಗದ ಯಾವುದೇ ಡ್ಯಾಂಗಳು ಭರ್ತಿ ಆಗಿಲ್ಲ. ಕೆಆರ್ಎಸ್ನಲ್ಲೂ ಅರ್ಧದಷ್ಟು ಮಾತ್ರ ನೀರಿದೆ. ಹೀಗಾಗಿ ಹೊಸ ಬೆಳೆ ಬೆಳೆಯದಂತೆ ನೀರಾವರಿ ಅಧಿಕಾರಿಗಳು ರೈತರಿಗೆ ಸೂಚಿಸಿದ್ದಾರೆ. ಆದ್ರೆ, ತಮಿಳುನಾಡಿಗೆ ಮಾತ್ರ ನೀರು ಬಿಟ್ಟಿರೋದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೆಆರ್ಎಸ್ ಡ್ಯಾಂ ಬಳಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಇದರಲ್ಲಿ ಪಾಲ್ಗೊಂಡ ಶಾಸಕ ದರ್ಶನ್ ಪುಟ್ಟಣ್ಣಯ್ಯ, ತಮಿಳುನಾಡಿಗೆ ನೀರು ನಿಲ್ಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿ, ತಮಿಳುನಾಡು ಸುಪ್ರೀಂ ಮೊರೆ ಹೋಗಿದೆ. ಅದಕ್ಕಾಗಿ ನೀರು ಬಿಡ್ತಿದ್ದೇವೆ ಎಂದಿದ್ದಾರೆ. ಅಧಿಕಾರಿಯ ಈ ಮಾತಿಗೆ ರೈತರು ಕೆಂಡಾಮಂಡಲರಾದರು.
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹೆಚ್ಚಿದ ಕಾವೇರಿ ಕಿಚ್ಚು
ತಮಿಳುನಾಡಿಗೆ ನೀರು ಬಿಟ್ಟಿರುವುದಕ್ಕೆ ಕಾವೇರಿ ಕಿಚ್ಚು ಹೆಚ್ಚಾಗಿದೆ. ಚಾಮರಾಜನಗದರಲ್ಲಿ ಕಬ್ಬು ಬೆಳೆಗಾರರ ಕೊಳ್ಳೇಗಾಲ ಹೆದ್ದಾರಿಯನ್ನು ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಹಾಗೂ ತಮಿಳುನಾಡಿಗೆ ಹರಿಯುತ್ತಿರುವ ನೀರನ್ನು ನಿಲ್ಲಿಸುವಂತೆ ಪಟ್ಟು ಹಿಡಿದ್ದರು.
ನೀರು ಬಿಟ್ಟ ಸರ್ಕಾರಕ್ಕೆ ಕುಟುಕಿದ ಹೆಚ್.ಡಿ.ಕುಮಾರಸ್ವಾಮಿ
ಕಾವೇರಿ ವಿಚಾರದಲ್ಲೂ ಮಂಡ್ಯ ರಾಜಕೀಯ ವಾರ್ ಶುರು
ಕಾವೇರಿ ನೀರು ತಮಿಳುನಾಡಿನ ಬಿಡುಗಡೆ ವಿಚಾರವಾಗಿ ದಳಪತಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ. ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ ಎಂದು ಟ್ವಿಟರ್ನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕಾವೇರಿ ವಿಚಾರ ಇದೀಗ ರಾಜಕೀಯ ಕಿತ್ತಾಟಕ್ಕೂ ವೇದಿಕೆ ಆಗಿದೆ. ಮಾಜಿ ಸಿಎಂ ಹೆಚ್ಡಿಕೆ ಮಾಡಿರುವ ಟ್ವೀಟ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮಂಡ್ಯ ಜಿಲ್ಲೆಯ ಜನರು ನೀರು ಬಿಡುವಂತೆ ಕೇಳಿದರು. ಆಗ ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನ ಕೇಳಿ ಎಂದು ಹೇಳಿದ್ರು ಎಂದು ತಿರುಗೇಟು ನೀಡಿದ್ದಾರೆ.
ಒಟ್ಟಾರೆ. ತಮ್ಮ ರಾಜ್ಯದ ರೈತರೇ ಸಂಕಷ್ಟದಲ್ಲಿದ್ದು, ಬೆಳೆಗೆ ನೀರಿಲ್ಲದೇ ಕಂಗಾಲಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ, ಕರುನಾಡಿನ ಕರುಣಾಜನಕ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು. ಅದರ ಬಂದಲೂ ತಮಿಳುನಾಡಿನ ಒತ್ತಡಕ್ಕೆ ಮಣಿದು ನೀರು ಬಿಟ್ಟಿದ್ದು ಎಷ್ಟು ಸರಿ ಅನ್ನೋದು ಕಾವೇರಿ ಭಾಗದ ಜನರ ಪ್ರಶ್ನೆ.
ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.9/9
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 17, 2023
KRS ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನಂದೀಶ್ ನೀಡಿರುವ ಸಂಪೂರ್ಣ ವರದಿ ಇಲ್ಲಿದೆ ನೋಡಿ.#TamilNadu #KRSDAM #Mandya #District #Karnataka #NewsFirstKannada pic.twitter.com/KLYecmwL5f
— NewsFirst Kannada (@NewsFirstKan) August 17, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ