/newsfirstlive-kannada/media/post_attachments/wp-content/uploads/2024/07/krs-2.jpg)
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಹಿನ್ನೆಲೆ ನದಿ ಪಾತ್ರದಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ KRS ಡ್ಯಾಂ ಒಳಹರಿವು ಹೆಚ್ಚಳವಾಗುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 50 ರಿಂದ 80 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲು ಸಿದ್ಧತೆ ಮಾಡಲಾಗಿದೆ. ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿದೆ.
ಇದನ್ನೂ ಓದಿ: VIDEO: ಶಿರೂರು ಗುಡ್ಡ ಕುಸಿತದಲ್ಲಿ ಅವಂತಿಕಾ, ಅರ್ಜುನ್ ಸಾವು.. ಇಬ್ಬರು ನೃತ್ಯ ಮಾಡುವ ದೃಶ್ಯ ವೈರಲ್​
ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 124.80 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ.
ಇಂದಿನ ಸಾಮರ್ಥ್ಯ - 49.452 ಟಿಎಂಸಿ
ಒಳ ಹರಿವು - 42,045 ಕ್ಯೂಸೆಕ್
ಹೊರ ಹರಿವು - 40,914 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us