/newsfirstlive-kannada/media/post_attachments/wp-content/uploads/2023/06/KRS-Dam.jpg)
ಮಂಡ್ಯ: ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆಯಾಗಿದೆ. ಹೀಗಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮ ಕೆ.ಆರ್.ಎಸ್ ಡ್ಯಾಂನ ಒಳಹರಿವು ಇಳಿಕೆಯಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದ ಕೃಷ್ಣರಾಜ ಸಾಗರ ಡ್ಯಾಂಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿ ಹರಿಯುತ್ತಿತ್ತು. ಆದರೆ ಮಳೆ ತಗ್ಗಿದ ಪರಿಣಾಮ ಒಳ ಹರಿವಿನ ಪ್ರಮಾಣ 1798 ಕ್ಯೂಸೆಕ್ ಗೆ ಇಳಿದಿದೆ.
ಕುಡಿಯುವ ನೀರಿನ ಉದ್ದೇಶಕ್ಕಾಗಿ 542 ಕ್ಯೂಸೆಕ್ ನೀರು ಹೊರಕ್ಕೆ ಹರಿಯುತ್ತಿದೆ. ಇನ್ನು 124.80 ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 83.70 ಅಡಿ ನೀರು ಸಂಗ್ರಹವಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 12.515 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ! ಪೋಷಕರು ಈ ಸುದ್ದಿ ಓದಲೇಬೇಕು
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 83.70 ಅಡಿ.
ಗರಿಷ್ಠ ಸಾಂದ್ರತೆ - 49.452 ಟಿಎಂಸಿ
ಇಂದಿನ ಸಾಂದ್ರತೆ - 12.515 ಟಿಎಂಸಿ
ಒಳ ಹರಿವು - 1,798 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ