/newsfirstlive-kannada/media/post_attachments/wp-content/uploads/2023/07/KRS-dam-2.jpg)
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನಾರ್ಭಟ ಮುಂದುವರೆದಿದೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಕೆಆರ್​ಎಸ್​ ಡ್ಯಾಂಗೆ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 103.40 ಅಡಿಗೆ ಏರಿಕೆ ಕಂಡಿದೆ. ಮಾತ್ರವಲ್ಲದೆ ಡ್ಯಾಂಗೆ 6,600 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಕೃಷ್ಣರಾಜ ಸಾಗರ 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಅಣೆಕಟ್ಟಾಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಸದ್ಯ 25.594 ಟಿಎಂಸಿ ನೀರು ಸಂಗ್ರಹವಾಗಿದೆ. ಕುಡಿಯುವ ನೀರಿಗಾಗಿ 575 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 103.40 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ
ಇಂದಿನ ಸಾಮರ್ಥ್ಯ - 25.594 ಟಿಎಂಸಿ
ಒಳ ಹರಿವು - 6,600 ಕ್ಯೂಸೆಕ್
ಹೊರ ಹರಿವು - 575 ಕ್ಯೂಸೆಕ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ