/newsfirstlive-kannada/media/post_attachments/wp-content/uploads/2024/07/KRS_DAM-2.jpg)
ಮಂಡ್ಯ: ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಗಳಿಗೆ ಕಳೆ ಬಂದಿದೆ. ಅದರಂತೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ (Krishna Raja Sagara) ಡ್ಯಾಂನ ಒಳ ಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ ಭರ್ತಿಗೆ 9 ಅಡಿ ನೀರು ಬಾಕಿ ಇದೆ. 115 ಅಡಿಗೆ ಏರಿಕೆ ಕಂಡಿದೆ. ಡ್ಯಾಂನಲ್ಲಿ ಪ್ರಸ್ತುತ 34,092 ಕ್ಯೂಸೆಕ್ ಒಳಹರಿವು ಇದೆ.
ಇದನ್ನೂ ಓದಿ: ಒಂದು ತಿಂಗಳ ಕಾಲ ಚಳ್ಳೆ ಹಣ್ಣು ತಿನ್ನಿಸಿದ್ದ ಸುಂದರಿ.. ಕೊನೆಗೂ ಹನಿಟ್ರ್ಯಾಪ್ ಕೇಸ್ನಲ್ಲಿ ಅರೆಸ್ಟ್..!
124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 115.78 ಅಡಿ ನೀರು ಭರ್ತಿ ಆಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ 37.947 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಡ್ಯಾಂನಿಂದ 1,148 ಕ್ಯೂಸೆಕ್ ನೀರು ಹೊರಕ್ಕೆ ಹೋಗ್ತಿದೆ.
ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ
- ಗರಿಷ್ಠ ಮಟ್ಟ: 124.80 ಅಡಿ
- ಇಂದಿನ ಮಟ್ಟ: 115.78 ಅಡಿ
- ಗರಿಷ್ಠ ಸಾಮರ್ಥ್ಯ: 49.452 ಟಿಎಂಸಿ
- ಇಂದಿನ ಸಾಮರ್ಥ್ಯ: 37.947 ಟಿಎಂಸಿ
- ಒಳ ಹರಿವು: 34,092 ಕ್ಯೂಸೆಕ್
- ಹೊರ ಹರಿವು: 1,148 ಕ್ಯೂಸೆಕ್
ಇದನ್ನೂ ಓದಿ: ಬೈಕ್ ಟ್ಯಾಕ್ಸಿ ನಿಷೇಧ ಬೆನ್ನಲ್ಲೇ ಬೆಂಗಳೂರಲ್ಲಿ ಆಟೋ ಪ್ರಯಾಣ ದರ ಏರಿಕೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ