/newsfirstlive-kannada/media/post_attachments/wp-content/uploads/2024/06/KRS.jpg)
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್​ಎಸ್​ (ಕೃಷ್ಣ ರಾಜ ಸಾಗರ) ಡ್ಯಾಂಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ನೀರಿನ ಮಟ್ಟ ಮತ್ತಷ್ಟು ಏರಿಕೆ ಆಗಲಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ನೀರು ಅಧಿಕ ಮಟ್ಟದಲ್ಲಿ ಸಂಗ್ರಹವಾಗುತ್ತಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಮತ್ತಷ್ಟು ಏರಿಕೆ ಆಗಲಿದೆ.
/newsfirstlive-kannada/media/post_attachments/wp-content/uploads/2024/07/KRS_DAM-3.jpg)
124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್​ ಜಲಾಶಯ ನಿನ್ನೆ 102.00 ಅಡಿ ಇದ್ದ ಡ್ಯಾಂನ ನೀರಿನ ಮಟ್ಟ ಇಂದು 103.70 ಅಡಿಗೆ ಏರಿಕೆ ಆಗಿದೆ. 17,544 ಕ್ಯೂಸೆಕ್ ನೀರು ಜಲಾಶಯಕ್ಕೆ ಬರುತ್ತಿರುವ ಬೆನ್ನಲ್ಲೇ 734 ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದಲ್ಲಿ 25.851 ಟಿಎಂಸಿ ನೀರು ಸಂಗ್ರಹ ಆಗಿದೆ. ಜೂನ್ ತಿಂಗಳ ಮೊದಲ ದಿನವೇ ಜಲಾಶಯ ಅರ್ಧದಷ್ಟು ಭರ್ತಿ ಆಗಿದೆ.
ಇಂದಿನ ಕೆಆರ್‌ಎಸ್ ನೀರಿನ ಮಟ್ಟ
- ಗರಿಷ್ಠ ಮಟ್ಟ- 124.80 ಅಡಿ
- ಇಂದಿನ ಮಟ್ಟ- 103.70 ಅಡಿ
- ಗರಿಷ್ಠ ಸಾಂದ್ರತೆ- 49.452 ಟಿಎಂಸಿ
- ಇಂದಿನ ಸಾಂದ್ರತೆ- 25.851 ಟಿಎಂಸಿ
- ಒಳ ಹರಿವು- 17,544 ಕ್ಯೂಸೆಕ್
- ಹೊರ ಹರಿವು- 735 ಕ್ಯೂಸೆಕ್
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us