newsfirstkannada.com

ಈಗ ಏನ್ ಮಾಡ್ತಾರೆ ಕೆ.ಎಸ್‌ ಈಶ್ವರಪ್ಪ? ಮಗನಿಗೆ ಬಿಜೆಪಿ ಟಿಕೆಟ್ ಮಿಸ್ ಆಗ್ತಿದ್ದಂತೆ ಮಹತ್ವದ ಸಭೆ

Share :

Published March 13, 2024 at 8:07pm

Update March 14, 2024 at 6:33am

    ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಬಸವರಾಜ ಬೊಮ್ಮಾಯಿಗೆ

    ಶಿವಮೊಗ್ಗದ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳು

    ಮುಂದಿನ ರಾಜಕೀಯ ನಡೆ ನಿರ್ಧಾರ ಪ್ರಕಟಿಸಲು ಬೆಂಬಲಿಗರ ಸಭೆ

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಹೊಸ ಕಂಪನ ಶುರುವಾಗಿದೆ. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗಿದ್ದು ಒಂದು ಕಡೆಯಾದ್ರೆ ಮತ್ತೊಂದೆಡೆ ಟಿಕೆಟ್‌ಗಾಗಿ ಲಾಬಿ ನಡೆಸಿದವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ.

ಮಾಜಿ ಸಚಿವ ಕೆ‌.ಎಸ್ ಈಶ್ವರಪ್ಪ ಅವರು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಭಾರೀ ಕಸರತ್ತು ನಡೆಸಿದ್ದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಈಗ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಹಾವೇರಿಯಲ್ಲಿ ಮಗನಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಈಶ್ವರಪ್ಪನವರು ಟೆನ್ಷನ್ ಆಗಿದ್ದಾರೆ. ಶಿವಮೊಗ್ಗದ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದೆ. ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಈಶ್ವರಪ್ಪನವರಿಗೆ ಹಲವಾರು ಮಂದಿ ಕರೆ ಮಾಡುತ್ತಿದ್ದಾರೆ. ಬೆಂಬಲಿಗರು, ಕುಟುಂಬ ಸದಸ್ಯರ ಜೊತೆ ಚರ್ಚೆ ನಡೆಸುತ್ತಿರುವ ಈಶ್ವರಪ್ಪನವರು ಮುಂದಿನ ತಮ್ಮ ರಾಜಕೀಯ ನಡೆ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: BREAKING: ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್​​ ಘೋಷಣೆ; ಮೈಸೂರಿನಿಂದ ಯದುವೀರ್​​ ಕಣಕ್ಕೆ!

ರಾಜ್ಯ ರಾಜಕೀಯದ ಶಕ್ತಿ ಕೇಂದ್ರವಾದ ಶಿವಮೊಗ್ಗದ ಬಿಜೆಪಿಯಲ್ಲೀಗ ಕಂಪನಗಳು ಕಂಡುಬರುತ್ತಿವೆ. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ತಮ್ಮ ಪುತ್ರ ಕಾಂತೇಶ್ ಹೆಸರು ಇಲ್ಲದ ಕಾರಣ ಕೆರಳಿ ಕೆಂಡವಾಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪಕ್ಷದ ನಾಯಕತ್ವದ ವಿರುದ್ಧವೇ ತೊಡೆ ತಟ್ಟಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಂಜಾರ ಸಮುದಾಯ ಭವನದಲ್ಲಿ ಮಾರ್ಚ್ 15 ರಂದು ಸಭೆ ಕರೆದಿರುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಈಗ ಏನ್ ಮಾಡ್ತಾರೆ ಕೆ.ಎಸ್‌ ಈಶ್ವರಪ್ಪ? ಮಗನಿಗೆ ಬಿಜೆಪಿ ಟಿಕೆಟ್ ಮಿಸ್ ಆಗ್ತಿದ್ದಂತೆ ಮಹತ್ವದ ಸಭೆ

https://newsfirstlive.com/wp-content/uploads/2024/02/KS_ESHWARAPPA-1.jpg

Load More