newsfirstkannada.com

ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ವಿರುದ್ಧವೇ ತೊಡೆ ತಟ್ಟುತ್ತಾರಾ ಈಶ್ವರಪ್ಪ? ಏನಾಗ್ತಿದೆ ಬಿಜೆಪಿಯಲ್ಲಿ..?

Share :

Published March 12, 2024 at 10:02am

    ಈಶ್ವರಪ್ಪ ಪುತ್ರನಿಗೆ ಹಾವೇರಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗ್ತಿದೆ

    ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಅವರೇ ಚುನಾವಣೆಗೆ ನಿಲ್ಲುವ ಸಾಧ್ಯತೆ

    ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್​​ಗೆ ಟಾಂಗ್ ನೀಡಲು ಮುಂದಾದ್ರಾ?

ಶಿವಮೊಗ್ಗ: ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಟಿಕೆಟ್ ಹಂಚಿಕೆಯ ಸರ್ಕಸ್ ಜೋರಾಗಿದೆ. ಇತ್ತ ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್​ ಬಳಿ ಬೇಡಿಕೆ ಇಟ್ಟಿದ್ದರು. ಸದ್ಯದ ಮಾಹಿತಿ ಪ್ರಕಾರ, ಈಶ್ವರಪ್ಪ ಪುತ್ರ ಕಾಂತೇಶ್​ಗೆ ಹಾವೇರಿ ಟಿಕೆಟ್ ಸಿಗೋದು ಡೌಟ್ ಎನ್ನಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಇದೇ ವಿಚಾರಕ್ಕೆ ಈಶ್ವರಪ್ಪ ಅವರು ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾವೇರಿಯಲ್ಲಿ ಪುತ್ರನಿಗೆ ಟಿಕೆಟ್ ಕೈತಪ್ಪಿದ್ರೆ, ಖುದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಪುತ್ರನಿಗೆ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಜೋರಾಗಿದೆ. ಮತ್ತೊಂದು ಕಡೆ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಿದ್ದೂ ತಾವು ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾ? ಕಾರ್ಯಕರ್ತರ ಅಭಿಪ್ರಾಯ ಏನಾಗಿರುತ್ತದೆ ಎಂದು ತಿಳಿದುಕೊಳ್ಳಲು ಈಶ್ವರಪ್ಪ ಮುಂದಾಗಿದ್ದು, ಶಿಕಾರಿಪುರ, ಸಾಗರ, ಭದ್ರಾವತಿ, ಶಿವಮೊಗ್ಗ ಮತ್ತಿತರ ಕಡೆ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರಂತೆ.

ವಿವಿಧ ಸಮಾಜದ ಪ್ರಮುಖರು ಹಾಗೂ ಪಕ್ಷದ ಮುಖಂಡರ ಸಭೆ ನಡೆಸಲು ಈಶ್ವರಪ್ಪ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಹಾಗೂ ತಮ್ಮ ಆಪ್ತ ಯಡಿಯೂರಪ್ಪನವರಿಗೆ ಟಾಂಗ್ ನೀಡಲು ಈಶ್ವರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ವಿರುದ್ಧವೇ ತೊಡೆ ತಟ್ಟುತ್ತಾರಾ ಈಶ್ವರಪ್ಪ? ಏನಾಗ್ತಿದೆ ಬಿಜೆಪಿಯಲ್ಲಿ..?

https://newsfirstlive.com/wp-content/uploads/2024/03/KSE.jpg

Load More