/newsfirstlive-kannada/media/post_attachments/wp-content/uploads/2024/10/Bidar-Bus-Accident.jpg)
ಬೀದರ್ ಹಾಗೂ ತೆಲಂಗಾಣದ ಗಡಿಯ ಒಂದು ಕಿಲೋ ಮೀಟರ್ ಅಂತರದಲ್ಲಿರುವ ಗಣೇಶಪುರದ ಬಳಿ ಭೀಕರ ಅಪಘಾತ ಸಂಭವಿಸಿದೆ. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಮೂವರು ಬೈಕ್‌ನಲ್ಲಿ ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ; 5 ವರ್ಷದ ಮಗು ದಾರುಣ ಸಾವು
ಒಂದೇ ಕುಟುಂಬದ ಗಂಡ, ಹೆಂಡತಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಗನ್ನಾಥ (35), ರೇಣುಕಾ (35), ವಿನೋದ್ ಕುಮಾರ್ (14) ಸಾವನ್ನಪ್ಪಿರುವವರು. ಮೂವರ ಮೃತದೇಹವನ್ನ ಬೀದರ್‌ನ ಬ್ರಿಮ್ಸ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ