ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಅನಾಹುತ
KSRTC ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು
ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ಬಾಗಲಕೋಟೆ: ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಕೆಎಸ್ಆರ್ಟಿಸಿ ಬಸ್ ಓವರ್ ಟೇಕ್ ಮಾಡಲು ಮುಂದಾದ ಟ್ರಕ್ವೊಂದು ಡಿಕ್ಕಿಯಾಗಿದೆ. ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚಿಂಚಖಂಡಿ ಗ್ರಾಮದ ಬಳಿ ನಡೆದಿದೆ.
ಬಾಗಲಕೋಟೆಯಿಂದ ಜಮಖಂಡಿ ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಿಂಚಖಂಡಿ ಗ್ರಾಮದಲ್ಲಿ ಪ್ರಯಾಣಿಕರಿಗಾಗಿ ನಿಂತಿತ್ತು. ಈ ವೇಳೆ ಮುಧೋಳ ಕಡೆಗೆ ಹೊರಟಿದ್ದ ಟ್ರಕ್ ನಿಂತಿದ್ದ ಬಸ್ ಓವರ್ ಟೇಕ್ ಮಾಡುವಾಗ ಈ ಅವಘಡ ಸಂಭವಿಸಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚಾಲಕ ಹಾಗೂ ಬಸ್ನ ಬಲಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ