newsfirstkannada.com

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಆಮೇಲೇನಾಯ್ತು?

Share :

09-09-2023

    ಹೊಂಗಡಹಳ್ಳದಿಂದ ಸಕಲೇಶಪುರಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್!

    ಸಕಲೇಶಪುರ ತಾಲೂಕಿನ ಮಂಕನಹಳ್ಳಿ ಸಮೀಪ ನಡೆದ ಭೀಕರ ಅಪಘಾತ

    ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ 50 ಪ್ರಯಾಣಿಕರು

ಹಾಸನ: ಚಾಲಕನ‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಕೆಎಸ್​ಆರ್​​ಟಿಸಿ ಬಸ್​​ ಉರುಳಿ ಬಿದ್ದಿರೋ ಘಟನೆ ಸಕಲೇಶಪುರ ತಾಲೂಕಿನ ಮಂಕನಹಳ್ಳಿ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಂಗಡಹಳ್ಳದಿಂದ ಸಕಲೇಶಪುರಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಎದುರುಗಡೆಯಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡಲು ಹೋಗಿ ನಿಯಂತ್ರಣ ಸಿಗದೆ ಈ ಅಪಘಾತ ಸಂಭವಿಸಿದೆ. ಚಾಲಕನ ಅತಿವೇಗ ಹಾಗೂ ಅಜಾಗರೂಕತೆಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇನ್ನು ಈ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸರಿ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಸದ್ಯ ಸ್ಥಳೀಯರ ನೆರವಿನಿಂದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಯಸಳೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ KSRTC ಬಸ್; ಆಮೇಲೇನಾಯ್ತು?

https://newsfirstlive.com/wp-content/uploads/2023/09/bus-7.jpg

Load More