newsfirstkannada.com

WATCH: ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ KSRTC ಬಸ್​​

Share :

10-08-2023

    ಸೇತುವೆ ನಿರ್ಮಾಣಕ್ಕೆ ರಸ್ತೆ ಪಕ್ಕದಲ್ಲಿ ತೆಗೆದಿದ್ದ ಹಳ್ಳಕ್ಕೆ ಬಿದ್ದ ಬಸ್​

    ತಲಕಾಡಿನಿಂದ ಮಳವಳ್ಳಿ ಕಡೆಗೆ ಹೋಗುತ್ತಿದ್ದ KSRTC ಬಸ್

    ಹೆದ್ದಾರಿ ಕಾಮಗಾರಿ ವೇಳೆ ನಾಮಫಲಕ ಹಾಕದೆ ಯಡವಟ್ಟು

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​​ ಹಳ್ಳಕ್ಕೆ ಬಿದ್ದ ಘಟನೆ ಮಾರೇಹಳ್ಳಿ ಬಳಿಯ ಕೊಳ್ಳೇಗಾಲ-ಮಳವಳ್ಳಿ ಹೆದ್ದಾರಿಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 11 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣಕ್ಕೆಂದು ರಸ್ತೆ ಪಕ್ಕದಲ್ಲಿ ಹಳ್ಳ ತೊಡಲಾಗಿತ್ತು. ಇದೇ ವೇಳೆ ವೇಗವಾಗಿ ಬಂದ ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದೆ. ತಲಕಾಡಿನಿಂದ ಮಳವಳ್ಳಿ ಕಡೆಗೆ ಬರುತ್ತಿದ್ದ ಸಾರಿಗೆ ಬಸ್​​ ಇದಾಗಿದೆ. ಬಸ್​​​ ಹಳ್ಳಕ್ಕೆ ನುಗ್ಗಿದ ಪರಿಣಾಮ ಚಾಲಕ ಸೇರಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಆದರೆ ನಾಮಫಲಕ ಹಾಕದೆ ಹೆದ್ದಾರಿ ಕಾಮಗಾರಿ ಮಾಡಿದ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕ್ರೈನ್ ಮೂಲಕ ಹಳ್ಳದಲ್ಲಿ ಬಿದ್ದ ಬಸ್​​ ಅನ್ನು ಹೊರ ತೆಗೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

WATCH: ಮಂಡ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ KSRTC ಬಸ್​​

https://newsfirstlive.com/wp-content/uploads/2023/08/bus-accident.jpg

Load More