newsfirstkannada.com

KSRTC ಬಸ್​-ಬೈಕ್​ ಮುಖಾಮುಖಿ ಡಿಕ್ಕಿ.. ಓರ್ವ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ

Share :

Published May 6, 2024 at 1:17pm

    ಒಂದೇ ಬೈಕ್​ನಲ್ಲಿ ತ್ರಿಬಲ್​ ರೈಡ್​ ಹೋಗುತ್ತಿದ್ದ ಮೂವರು ಹುಡುಗರು

    ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದ ಪಲ್ಸರ್​​ ಬೈಕ್​, ಓರ್ವ ಸಾವು

    ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ ಸ್ಥಳೀಯರು

ತುಮಕೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ನಡೆದಿದೆ. ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹೇಂದ್ರ (19), ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚರಣ್ (19), ಹಾಗೂ ಅನಿಲ್ (19) ಗಂಭೀರ ಗಾಯಗೊಂಡಿದ್ದಾರೆ. ಈ ಮೂವರು ಮಧುಗಿರಿ ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮದವರಾಗಿದ್ದು, ಒಂದೇ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕೆಎಸ್ಆರ್​ಟಿಸಿ ಬಸ್ ಗೆ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.

ಇದನ್ನೂ ಓದಿ: ಸೆಕೆ ಎಂದು ಈಜಲು ಹೋಗಿ ನೀರುಪಾಲು.. 20 ಅಡಿ ಎತ್ತರದಿಂದ ಜಿಗಿದವನು ಮತ್ತೆ ಮೇಲೆ ಬರಲೇ ಇಲ್ಲ

ಗಂಭೀರವಾಗಿ ಗಾಯಗೊಂಡ ಚರಣ್ ಹಾಗೂ ಅನಿಲ್​ರನ್ನ ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಬಸ್​-ಬೈಕ್​ ಮುಖಾಮುಖಿ ಡಿಕ್ಕಿ.. ಓರ್ವ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ

https://newsfirstlive.com/wp-content/uploads/2024/05/KSRTC-Bus.jpg

Load More