ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ
ಭಯಾನಕ ಅಪಘಾತದಲ್ಲಿ 6 ಮಂದಿ ದಾರುಣ ಸಾವು
ಈ ಭೀಕರ ಅಪಘಾತಕ್ಕೆ ಮುಖ್ಯ ಕಾರಣವೇನು..?
ರಾಮನಗರ: ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ 6 ಮಂದಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ಸಾತನೂರು ಕೆಮ್ಮಾಳೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.
ಕೆಎಸ್ಆರ್‌ಟಿಸಿ ಕನಕಪುರದಿಂದ ಮಳವಳ್ಳಿ ಕಡೆಗೆ ಹೋಗುತ್ತಿತ್ತು. ಕಾರು ಮಳವಳ್ಳಿಯಿಂದ ಕನಕಪುರ ಕಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗೇಶ್, ಪುಟ್ಟರಾಜು, ಜ್ಯೋತಿರ್ಲಿಂಗಪ್ಪ, ಗೋವಿಂದ, ಕುಮಾರ್ ಮೃತ ದುರ್ದೈವಿಗಳು.
ಮೃತರು ಬೆಂಗಳೂರಿನ ಮಾರತ್ತಹಳ್ಳಿ ಹಾಗೂ ಚಂದಾಪುರದವರು ಎಂದು ತಿಳಿದು ಬಂದಿದೆ. ಕೆಎಸ್ಆರ್‌ಟಿಸಿ ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಸಾತನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನ ಯಡವಟ್ಟಿನಿಂದ ಈ ಭೀಕರ ಅಪಘಾತ ನಡೆದಿದೆ ಎನ್ನಲಾಗಿದೆ. ಇದೇ ಜಾಗದಲ್ಲಿ ವರ್ಷದ ಹಿಂದೆ ಮಗು ಮತ್ತು ತಾಯಿ ಸಹ ತೀರಿಕೊಂಡಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ