ಗಾಯಗೊಂಡ ಪ್ರಯಾಣಿಕರನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲು
KSRTC ಬಸ್ ಡಿಕ್ಕಿ ಹೊಡೆತಕ್ಕೆ ಛಿದ್ರ ಛಿದ್ರವಾದ ಮಿನಿ ಬಸ್
ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ಅಪಘಾತ
ಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಂತಾಮಣಿ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಇಲಿಯಾಸ್ (40) ಮೃತ ವ್ಯಕ್ತಿ. ಇಲಿಯಾಸ್ ಮಿನಿಬಸ್ನಲ್ಲಿದ್ದ ಕೈವಾರ ಮೂಲದ ನಿವಾಸಿ.
ಮಿನಿಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಭೀಕರ ಅಪಘಾತ ಸಂಭಸಿದೆ ಎಂದು ಹೇಳಲಾಗಿದೆ. ಕೆಎಸ್ಆರ್ಟಿಸಿ ಬಸ್ ಹಾಗೂ ಮಿನಿಬಸ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮಿನಿ ಬಸ್ನಲ್ಲಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದಿಂದ ಚಿಂತಾಮಣಿಯಿಂದ ಬೆಂಗಳೂರಿಗೆ ಹೋಗುವ ರಸ್ತೆ ಫುಲ್ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಚಿನ್ನಸಂದ್ರ ಗ್ರಾಮದ ಬಳಿ ಟ್ರಾಫಿಕ್ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ