newsfirstkannada.com

KSRTC ಮತ್ತು ಮಿನಿಬಸ್ ನಡುವೆ ಭೀಕರ ಅಪಘಾತ; ಓರ್ವ ಸಾವು, 30ಕ್ಕೂ ಹೆಚ್ಚು ಮಂದಿ ಗಂಭೀರ

Share :

09-11-2023

    ಗಾಯಗೊಂಡ ಪ್ರಯಾಣಿಕರನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲು

    KSRTC ಬಸ್ ಡಿಕ್ಕಿ ಹೊಡೆತಕ್ಕೆ ಛಿದ್ರ ಛಿದ್ರವಾದ ಮಿನಿ ಬಸ್

    ಚಿಂತಾಮಣಿ‌ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ಅಪಘಾತ

ಚಿಕ್ಕಬಳ್ಳಾಪುರ: ಕೆಎಸ್ಆರ್​ಟಿಸಿ ಬಸ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಂತಾಮಣಿ‌ ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಇಲಿಯಾಸ್ (40) ಮೃತ ವ್ಯಕ್ತಿ. ಇಲಿಯಾಸ್​ ಮಿನಿಬಸ್​ನಲ್ಲಿದ್ದ ಕೈವಾರ ಮೂಲದ ನಿವಾಸಿ.

ಮಿನಿಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಭೀಕರ ಅಪಘಾತ‌ ಸಂಭಸಿದೆ ಎಂದು ಹೇಳಲಾಗಿದೆ. ಕೆಎಸ್ಆರ್​ಟಿಸಿ ಬಸ್ ಹಾಗೂ ಮಿನಿಬಸ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮಿನಿ ಬಸ್​ನಲ್ಲಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು ಬಸ್​​ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದಿಂದ ಚಿಂತಾಮಣಿಯಿಂದ ಬೆಂಗಳೂರಿಗೆ ಹೋಗುವ ರಸ್ತೆ ಫುಲ್ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಚಿನ್ನಸಂದ್ರ ಗ್ರಾಮದ ಬಳಿ ಟ್ರಾಫಿಕ್ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಮತ್ತು ಮಿನಿಬಸ್ ನಡುವೆ ಭೀಕರ ಅಪಘಾತ; ಓರ್ವ ಸಾವು, 30ಕ್ಕೂ ಹೆಚ್ಚು ಮಂದಿ ಗಂಭೀರ

https://newsfirstlive.com/wp-content/uploads/2023/11/Bus-Accident-2.jpg

Load More