KSRTC ಬಸ್, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ.. ಹಲವರಿಗೆ ಗಂಭೀರ ಗಾಯ

author-image
Veena Gangani
Updated On
KSRTC ಬಸ್, ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ.. ಹಲವರಿಗೆ ಗಂಭೀರ ಗಾಯ
Advertisment
  • ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟ್ರಕ್‌
  • ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್
  • ಅಪಘಾತದಲ್ಲಿ ಹಲವರಿಗೆ ಗಾಯ, ಆಸ್ಪತ್ರೆ ದಾಖಲು

ಶಿವಮೊಗ್ಗ: ಕೆಎಸ್​ಆರ್​ಟಿಸಿ ಬಸ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿಯಾಗಿರೋ ಘಟನೆ ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಹತ್ತಿರ ನಡೆದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ದೆಹಲಿಯಾತ್ರೆ.. ಮತ್ತೆ ಕಾಂಗ್ರೆಸ್​​ನಲ್ಲಿ ಬಿಸಿಬಿಸಿ ಟಾಕ್..!

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಆನಂದಪುರದಿಂದ ಸಾಗರ ಕಡೆಗೆ ಹೋಗುತ್ತಿದ್ದ ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡವರನ್ನು ಸಾಗರದ ಮರ್ಕಜ್‌ ಶಾಲೆಯ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಪಘಾತ ಪರಿಣಾಮ ರಸ್ತೆ ಸಂಪೂರ್ಣ ಬಂದ್‌ ಆಗಿದೆ. ಹೀಗಾಗಿ ಹೆದ್ದಾರಿಯಲ್ಲಿ ಕೆಲ ಹೊತ್ತು ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment